ನಿಟ್ಟೆ ಇಂಜಿನಿಯರಿಂಗ್ ಕಾಲೇಜ್; ಗಾಂಧಿ ಜಯಂತಿ, ಶಾಸ್ತ್ರೀ ಜಯಂತಿ

Upayuktha
0



ನಿಟ್ಟೆ: 'ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದೂರ್ ಶಾಸ್ತ್ರಿಯಂತಹ ಮಹಾನ್ ನಾಯಕರು ತಮ್ಮ ಜೀವನ ಶೈಲಿಯನ್ನು ಇಂದಿನ ಯುವಕರಿಗೆ ಮಾದರಿಯಾಗಿಸಿದವರು' ಎಂದು ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ನಿರಂಜನ್ ಎನ್ ಚಿಪ್ಳೂಣ್ಕರ್ ಅಭಿಪ್ರಾಯಪಟ್ಟರು.


ನಿಟ್ಟೆ ತಾಂತ್ರಿಕ ಕಾಲೇಜಿನ ರೆಡ್ ಕ್ರಾಸ್ ಯುನಿಟ್ ವತಿಯಿಂದ ಅ. 2 ರಂದು ಆಯೋಜಿಸಿದ್ದ ಮಹಾತ್ಮಾ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಜಯಂತಿ ಸಮಾರಂಭ ಹಾಗೂ ಅದರ ಅಂಗವಾಗಿ ಸ್ವಚ್ಛಭಾರತ್ ಅಭಿಯಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.


ಕಾರ್ಯಕ್ರಮದಲ್ಲಿ ಕ್ಯಾಂಪಸ್ ಮೈಟೆನೆನ್ಸ್ ಮತ್ತು ಡೆವಲಪ್ಮೆಂಟ್ ನಿರ್ದೇಶಕ ಪ್ರೊ. ಎ ಯೋಗೀಶ್ ಹೆಗ್ಡೆ, ವಿದ್ಯಾರ್ಥಿ ಕ್ಷೇಮಪಾಲನೆ ವಿಭಾಗದ ಡೀನ್ ಡಾ. ನರಸಿಂಹ ಬೈಲ್ಕೇರಿ, ಯೂಥ್ ರೆಡ್ ಕ್ರಾಸ್ ನ ಪ್ರಾಧ್ಯಾಪಕ ಸಂಯೋಜಕ ಡಾ. ಜನಾರ್ದನ್ ನಾಯಕ್ ಉಪಸ್ಥಿತರಿದ್ದರು. ಸಭಾಕಾರ್ಯಕ್ರಮದ ಅನಂತರ ನಿಟ್ಟೆ ತಾಂತ್ರಿಕ ಕಾಲೇಜಿನ 2೦೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ನಿಟ್ಟೆ ಕಾಲೇಜು ಕ್ಯಾಂಪಸ್ ನ ಸುತ್ತಮುತ್ತ ಸ್ವಚ್ಛತಾ ಕಾರ್ಯವನ್ನು ಕೈಗೊಂಡರು.



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top