ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ 474 ಯುನಿಟ್ ರಕ್ತ ಸಂಗ್ರಹ

Upayuktha
0


ನಿಟ್ಟೆ: ‘ರಕ್ತಮಾಡುವುದರಿಂದ ನಾವು ಇನ್ನೊಬ್ಬರ ಜೀವ ಉಳಿಯಲು ಕಾರಣವಾಗುತ್ತೇವೆ. ಮಾನವ ಜೀವನದಲ್ಲಿ ರಕ್ತದಾನವೆಂಬ ಪುಣ್ಯಕಾರ್ಯದಲ್ಲಿ ನಾವು ಪಾಲ್ಗೊಳ್ಳಬೇಕು’ ಎಂದು ಲಯನ್ಸ್ ಜಿಲ್ಲೆ 312ಸಿ ಯ ಜಿಲ್ಲಾ 2ನೇ ವೈಸ್ ಗವರ್ನರ್ ಪಿ.ಎಂ.ಜೆ.ಎಫ್ ಲಯನ್ ಹರಿಪ್ರಸಾದ್ ರೈ ಅಭಿಪ್ರಾಯಪಟ್ಟರು.


ಅವರು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್), ರೆಡ್‌ಕ್ರಾಸ್ ಸೊಸೈಟಿ, 6 (ಕೆ.ಎ.ಆರ್) ನೇವಿ ಎನ್.ಸಿ.ಸಿ ಸಬ್‌ಯುನಿಟ್ ನಿಟ್ಟೆ, ಮೆಕ್ಯಾನಿಕಲ್ ವಿಭಾಗದ ಏಐಎಂಎಸ್ ಘಟಕ, ರೋಟರಿಕ್ಲಬ್ ನಿಟ್ಟೆ, ಲಯನ್ಸ್ ಕ್ಲಬ್ ಹಿರಿಯಡ್ಕ, ಲಯನ್ಸ್ ಕ್ಲಬ್ ಬಪ್ಪನಾಡು, ಹೆಚ್.ಡಿ.ಎಫ್.ಸಿ ಬ್ಯಾಂಕ್, ಕೆ.ಎಸ್ ಹೆಗ್ಡೆ ಮೆಡಿಕಲ್ ಕಾಲೇಜು, ನಿಟ್ಟೆ ಗಾಜ್ರಿಯಾ ಆಸ್ಪತ್ರೆ ಮತ್ತು ಉಡುಪಿ ಜಿಲ್ಲಾ ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ಅ.೧೫ ರಂದು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ‘ನಿಟ್ಟೆ ತಾಂತ್ರಿಕ ಕಾಲೇಜಿನ ಈ ಯೋಜನೆಯಲ್ಲಿ ವಿವಿಧ ಸಂಘ ಸಂಸ್ಥೆಗಳು ಕೈಜೋಡಿಸಿರುವುದು ಶ್ಲಾಘನೀಯ. ಇಂತಹ ಶಿಬಿರಗಳು ಸಮಾಜದ ಆರೋಗ್ಯದತ್ತ ಗಮನ ಹರಿಸುವುದರ ಜೊತೆಗೆ ಯುವಕರಲ್ಲಿ ಸೇವಾ ಮನೋಭಾವ ಬೆಳೆಸಲು ಸಹಕಾರಿಯಾಗಿವೆ’ ಎಂದು ಅವರು ಹೇಳಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ನಿರಂಜನ್ ಎನ್.ಚಿಪ್ಳೂಣ್ಕರ್ ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ ‘ರಕ್ತದಾನ ಶಿಬಿರವು ಒಂದು ಉತ್ತಮ ಯೋಜನೆಯಾಗಿದ್ದು ಇದಕ್ಕೆ ವಿದ್ಯಾರ್ಥಿಗಳ ಬೆಂಬಲ ಅಗತ್ಯ. ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಈ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳುವ ನಿಟ್ಟಿನಲ್ಲಿ ವಿವಿಧ ಸಂಘಸಂಸ್ಥೆಗಳು ಹಾಗೂ ನಿಟ್ಟೆ ಸಂಸ್ಥೆಯ ೨ ಆಸ್ಪತ್ರೆ ಹಾಗೂ ಉಡುಪಿ ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿಗಳ ಹಾಗೂ ಕಾಲೇಜಿನ ವಿದ್ಯಾರ್ಥಿಗಳ ಶ್ರಮ ಶ್ಲಾಘನೀಯ. ಕಾಲೇಜಿನಲ್ಲಿ ಇರುವ ವಿದ್ಯಾರ್ಥಿಗಳ ಸಂಖ್ಯೆಯನ್ನು ಪರಿಗಣಿಸಿ ರಕ್ತದಾನ ಶಿಬಿರವನ್ನು ವರ್ಷಕ್ಕೆ ಎರಡು ಬಾರಿ ನಡೆಸುವ ಬಗ್ಗೆ ಆಶಯವಿದೆ’ ಎಂದರು.


ನಿಟ್ಟೆ ಕ್ಯಾಂಪಸ್ ನ ನಿರ್ವಹಣೆ ಹಾಗೂ ಅಭಿವೃದ್ದಿ ವಿಭಾಗದ ನಿರ್ದೇಶಕ ಯೋಗೀಶ್ ಹೆಗ್ಡೆ, ನಿಟ್ಟೆ ರೋಟರಿ ಕ್ಲಬ್‌ನ ಅಧ್ಯಕ್ಷ ಡಾ. ರಘುನಂದನ್ ಕೆ ಆರ್, ಹಿರಿಯಡ್ಕ ಲಯನ್ಸ್ ಕ್ಲಬ್ ಅಧ್ಯಕ್ಷ ರಘುವೀರ್ ಶೆಟ್ಟಿಗಾರ್, ಬಪ್ಪನಾಡು ಲಯನ್ಸ್ ಕ್ಲಬ್ ಅಧ್ಯಕ್ಷನಿಲ್ ಕುಮಾರ್, ಎಚ್.ಡಿ.ಎಫ್.ಸಿ ಬ್ಯಾಂಕ್ ಅಧಿಕಾರಿ ರಾಘವೇಂದ್ರ ನಾಯಕ್, ನಿಟ್ಟೆ ರೆಡ್‌ಕ್ರಾಸ್‌ನ ಮುಖ್ಯಸ್ಥ ಡಾ.ಜನಾರ್ದನ್ ನಾಯಕ್, ಎನ್.ಸಿ.ಸಿ ಆಫೀಸರ್ ಡಾ.ಶಿವಪ್ರಸಾದ್ ಶೆಟ್ಟಿ, ಏಐಎಂಎಸ್ ಸಂಯೋಜಕ ಡಾ.ಮೆಲ್ವಿನ್, ಎನ್.ಎಸ್.ಎಸ್ ಅಧಿಕಾರಿ ಡಾ. ಧನಂಜಯ್, ಕೆ.ಎಸ್ ಹೆಗ್ಡೆ ಆಸ್ಪತ್ರೆ ಹಾಗೂ ಉಡುಪಿ ಜಿಲ್ಲಾ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ವಿದ್ಯಾರ್ಥಿನಿ ಪ್ರತೀಕ್ಷಾ ನಾಯಕ್ ಸ್ವಾಗತಿಸಿದರು. ವಿದ್ಯಾರ್ಥಿನಿ ನಿಧಿ ವಂದಿಸಿದರು. ವಿದ್ಯಾರ್ಥಿನಿ ವರ್ಷಾ ಎನ್ ಕಾರ್ಯಕ್ರಮ ನಿರೂಪಿಸಿದರು.


ಈ ಒಂದು ದಿನದ ರಕ್ತದಾನ ಶಿಬಿರದಲ್ಲಿ ವಿದ್ಯಾರ್ಥಿಗಳು, ಪ್ರಾಧ್ಯಾಪಕ ಹಾಗೂ ಭೋದಕೇತರ ವರ್ಗದವರ ರಕ್ತದಾನದೊಂದಿಗೆ 474 ಯುನಿಟ್ ರಕ್ತವನ್ನು ಸಂಗ್ರಹಿಸಲಾಗಿದೆ ಎಂದು ಕಾಲೇಜಿನ ಪತ್ರಿಕಾಪ್ರಕಟಣೆಯಲ್ಲಿ ಪ್ರಾಂಶುಪಾಲರು ತಿಳಿಸಿದ್ದಾರೆ.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top