ಮಂಗಳೂರು: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ದ.ಕ.ಜಿಲ್ಲಾ ಸಮಿತಿ ಮತ್ತು ವಿಶ್ವವಿದ್ಯಾಲಯ ಕಾಲೇಜು ಮಂಗಳೂರು ಇದರ ಮಂಗಳಗಂಗೆ ವಾರ್ಷಿಕ ಸಂಚಿಕೆ ವತಿಯಿಂದ ಅ.17 ಮತ್ತು 18 ರಂದು ವಿ.ವಿ. ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ಸೃಜನೇತರ ಬರವಣಿಗೆ ಕಾರ್ಯಾಗಾರ ನಡೆಯಲಿದೆ. ಅ.17ರಂದು ಮಧ್ಯಾಹ್ನ 2ಕ್ಕೆ ಬೆಂಗಳೂರು ಉತ್ತರ ವಿ.ವಿ.ಯ ಕುಲಪತಿ ಪ್ರೊ.ನಿರಂಜನ ವಾನಳ್ಳಿ ಕಾರ್ಯಾಗಾರ ಉದ್ಘಾಟಿಸಲಿದ್ದಾರೆ. ಮಂಗಳೂರು ವಿ.ವಿ.ಯ ಕುಲಪತಿ ಪ್ರೊ. ಪಿ. ಎಲ್ ಧರ್ಮ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ವಿ.ವಿ.ಯ ಕುಲಸಚಿವ ಕೆ.ರಾಜು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ವಿ.ವಿ. ಕಾಲೇಜು ಪ್ರಾಂಶುಪಾಲ ಪ್ರೊ.ಗಣಪತಿ ಗೌಡ, ಅಭಾಸಾಪ ದ.ಕ.ಜಿಲ್ಲಾಧ್ಯಕ್ಷ ಪಿ.ಬಿ. ಹರೀಶ್ ರೈ ಉಪಸ್ಥಿತರಿರುವರು. ಹಿರಿಯ ಲೇಖಕ ಡಾ.ಚ.ನ. ಶಂಕರ್ ರಾವ್, ಪತ್ರಕರ್ತರಾದ ಆರ್.ಸಿ.ಭಟ್, ಗುರುಪ್ರಸಾದ್ ಟಿ.ಎನ್. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ಅಭಾಸಾಪ ರಾಜ್ಯ ಪ್ರಧಾನ ಕಾರ್ಯದರ್ಶಿ ರಘುನಂದನ್ ಭಟ್ ನರೂರು ಸಮಾರೋಪ ಭಾಷಣ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ