ಉಡುಪಿ: ಭಾರತದ ಮೊದಲ ಉಪ ಪ್ರಧಾನಿ ಹಾಗೂ ಗೃಹ ಸಚಿವ, ರಾಷ್ಟ್ರೀಯ ಏಕೀಕರಣದ ರೂವಾರಿ, 'ಉಕ್ಕಿನ ಮನುಷ್ಯ' ಸರ್ದಾರ್ ವಲ್ಲಭಬಾಯಿ ಪಠೇಲ್ ಅವರ 150ನೇ ಜನ್ಮ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಉಡುಪಿ ನಗರದ ಸಹಯೋಗದೊಂದಿಗೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರ ನೇತೃತ್ವದಲ್ಲಿ 'ಏಕತಾ ನಡಿಗೆ'ಯು ಅ.31 ಶುಕ್ರವಾರ ಬೆಳಿಗ್ಗೆ ಗಂಟೆ 7.30ಕ್ಕೆ ಉಡುಪಿ ಕಲ್ಸಂಕ ರಾಜಾಂಗಣ ಪಾರ್ಕಿಂಗ್ ರಸ್ತೆಯ ಬಳಿಯಿಂದ ಕಡಿಯಾಳಿಯ ಬಿಜೆಪಿ ಜಿಲ್ಲಾ ಕಛೇರಿಯ ವರೆಗೆ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ತಿಳಿಸಿದರು.
ಅವರು ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು ಅವರ ಅಧ್ಯಕ್ಷತೆಯಲ್ಲಿ ನಡೆದ 'ಏಕತಾ ನಡಿಗೆ'ಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಂಸದರು, ಶಾಸಕರು, ಪಕ್ಷದ ಪ್ರಮುಖರು ಪಾಲ್ಗೊಳ್ಳಲಿದ್ದು, ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಮತ್ತು ಪಕ್ಷದ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸರ್ದಾರ್ ಪಠೇಲ್ ಅವರ ಗೌರವಾರ್ಥ ನಡೆಯುವ 'ಏಕತಾ ನಡಿಗೆ'ಯನ್ನು ಯಶಸ್ವಿಗೊಳಿಸಬೇಕು ಎಂದು ಅವರು ವಿನಂತಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರೇಷ್ಮಾ ಉದಯ ಶೆಟ್ಟಿ, ಶ್ರೀಕಾಂತ್ ನಾಯಕ್, ಜಿಲ್ಲಾ ಕಾರ್ಯದರ್ಶಿಗಳಾದ ಗಿರೀಶ್ ಎಮ್. ಅಂಚನ್, ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ್ ಆಚಾರ್ಯ ಕಪ್ಪೆಟ್ಟು, ರಶ್ಮಿತಾ ಬಿ. ಶೆಟ್ಟಿ ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


 
 
 
 
 
 
 
 
 
 
 
 

 
