ಅ. 18; ಅಂಬಿಕಾದಲ್ಲಿ ಮಾನಸೋಲ್ಲಾಸ - 2025

Upayuktha
0



ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆ ಹಾಗೂ ನೆಲ್ಲಿಕಟ್ಟೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯಗಳ ಪ್ರತಿಭಾ ದಿನಾಚರಣೆ ‘ಮಾನಸೋಲ್ಲಾಸ – 2025’ ಅಕ್ಟೋಬರ್ 18ರಂದು ಬೆಳಗ್ಗೆ 9ರಿಂದ ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದಲ್ಲಿ ನಡೆಯಲಿದೆ.


ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಅಧ್ಯಕ್ಷತೆ ವಹಿಸುವರು. ನಿಟ್ಟೆ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಎಂ.ಎಸ್.ಮೂಡಿತ್ತಾಯ, ಸಂಸ್ಥೆಯ ಹಿರಿಯ ವಿದ್ಯಾರ್ಥಿನಿ, ಬೆಂಗಳೂರಿನ ನಾರಾಯಣ ಹೆಲ್ತ್ ಸಂಸ್ಥೆಯ ಚರ್ಮರೋಗ ತಜ್ಞೆ ಡಾ.ಭವಿಷ್ಯ ಶೆಟ್ಟಿ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶೃಇ ಎಸ್ ನಟ್ಟೋಜ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.



Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top