ಕಠಿಣ ಪರಿಶ್ರಮಕ್ಕೆ ಪ್ರತಿಫಲವಾಗಿ ಯಶಸ್ಸು ದೊರೆಯುತ್ತದೆ : ಡಾ. ಶ್ರೀಧರ ಹೆಚ್. ಜಿ.

Upayuktha
0



ಪುತ್ತೂರು: ‘ವಿದ್ಯಾರ್ಥಿಗಳು ತಮ್ಮ ಬುದ್ಧಿಮತ್ತೆಯನ್ನು ಹೆಚ್ಚಿಸಲು ಅನೇಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು. ನಮ್ಮ ವಿದ್ಯಾಭ್ಯಾಸ ಪೂರ್ಣಗೊಳಿಸಿದ ಬಳಿಕ ಉದ್ಯೋಗ ಅರಸಿ ಬೇರೆ ಬೇರೆ ಕ್ಷೇತ್ರಗಳಿಗೆ ಹೋಗುವವರಿದ್ದೇವೆ. ಆ ಸಂದರ್ಭದಲ್ಲಿ ನಮಗೆ ದೃಢ ಮನಸ್ಸು ಹಾಗೂ ಪ್ರೋತ್ಸಾಹ ನೀಡುವವರು, ಬೆಂಬಲಿಸುವವರು ಇರಬೇಕೆಂದು ಬಯಸುತ್ತೇವೆ. ನಾವು ಮಾಡುವ ಕೆಲಸವನ್ನು ಪ್ರೀತಿಸಿದಾಗ ಅದಕ್ಕೆ ತಕ್ಕುದಾದ ಯಶಸ್ಸು ದೊರೆಯುತ್ತದೆ. ನಮ್ಮಿಂದ ಯಾವುದೂ ಅಸಾಧ್ಯವಲ್ಲ. ಸಾಧಿಸುವ ಮನಸ್ಸಿದ್ದರೆ ಎಲ್ಲವನ್ನೂ ಸಾಧಿಸಬಹುದು’ ಎಂದು ಮನಃಶಾಸ್ತ್ರ ವಿಭಾಗದ ಮುಖ್ಯಸ್ಥ ಚಂದ್ರಕಾಂತ್ ಗೋರೆ ಹೇಳಿದರು.


ಇವರು ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿ ಸ್ನಾತಕೋತ್ತರ ವಾಣಿಜ್ಯ ವಿಭಾಗದ ವತಿಯಿಂದ ನಡೆದ ಕೌಶಲ್ಯ ವರ್ಧನೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಸ್ನಾತಕೋತ್ತರ ವಿಭಾಗ ನಿರ್ದೇಶಕ ಡಾ. ಶ್ರೀಧರ ಹೆಚ್. ಜಿ. ಮಾತನಾಡುತ್ತ, ‘ನಮ್ಮಲ್ಲಿ ಮುಖ್ಯವಾಗಿ ಏಕಾಗ್ರತೆ ಇರಬೇಕು. ನಮ್ಮಿಂದ ಅಸಾಧ್ಯವಾದದ್ದು ಯಾವುದೂ ಇಲ್ಲ. ನಮ್ಮಲ್ಲಿರುವ ಸಾಮರ್ಥ್ಯವನ್ನು ಸಮರ್ಥ ರೀತಿಯಲ್ಲಿ ಉಪಯೋಗಿಸಿಕೊಳ್ಳಬೇಕು. ಸಾಧನೆ ಮಾಡಿದ ಎಲ್ಲಾ ಸಾಧಕರು ಕಠಿಣ ಪರಿಶ್ರಮದಿಂದಲೇ ಸಾಧಿಸಿದವರಗಿದ್ದಾರೆ’ ಎಂದು ಹೇಳಿದರು.


ವೇದಿಕೆಯಲ್ಲಿ ಕಾಲೇಜಿನ ಸ್ನಾತಕೋತ್ತರ ವಿಭಾಗದ ಡೀನ್ ಡಾ. ವಿಜಯಸರಸ್ವತಿ, ದ್ವಿತೀಯ ಎಂ.ಕಾಂ ವಿಭಾಗದ ವಿದ್ಯಾರ್ಥಿ ನವೀನ್ ಕೃಷ್ಣ ಉಪಸ್ಥಿತರಿದ್ದರು. ಅಂತಿಮ ಎಂ.ಕಾಂ. ವಿದ್ಯಾರ್ಥಿನಿ ಅನನ್ಯ ನಿರೂಪಿಸಿದರು. ಅಂತಿಮ ಎಂ.ಕಾಂ. ವಿದ್ಯಾರ್ಥಿನಿ ರಕ್ಷಿತ ಸ್ವಾಗತಿಸಿ, ಯಶ್ಮಿತ ವಂದಿಸಿದರು. ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top