ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ದ್ವಿತೀಯ ಪಿಯುಸಿ ವಾಣಿಜ್ಯ ಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಪ್ರತೀಕ್ಷಾ ಶೆಣೈ ಅವರು ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಹಲವು ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಬೆಂಗಳೂರಿನ ನ್ಯಾಶನಲ್ ಕಾಲೇಜಿನ ಸಹಯೋಗದೊಂದಿಗೆ ಬೆಂಗಳುರಿನ ಬಸವನಗುಡಿಯಲ್ಲಿ ನಡೆದ ಈ ಸ್ಪರ್ಧೆಯ 50 ಮೀಟರ್ ಬ್ರೆಸ್ಟ್ ಸ್ಟ್ರೋಕ್ ಹಾಗೂ 200 ಮೀಟರ್ ಬ್ರೆಸ್ಟ್ ಸ್ಟ್ರೋಕ್ ನಲ್ಲಿ ಬೆಳ್ಳಿ, 100 ಮೀಟರ್ ಬ್ರೆಸ್ಟ್ ಸ್ಟ್ರೋಕ್ ಮತ್ತು 4ಥ100 ರಿಲೇಯಲ್ಲಿ ಕಂಚಿನ ಪದಕ ಪಡೆದು ಪ್ರತೀಕ್ಷಾ ಶೆಣೈ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರು ಪುತ್ತೂರಿನ ಎಂ. ನರಸಿಂಹ ಶೆಣೈ ಮತ್ತು ಶ್ರೀಲಕ್ಷ್ಮಿ ಶೆಣೈ ದಂಪತಿ ಪುತ್ರಿ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


