ಸಂತ ಫಿಲೋಮಿನಾ PU ಕಾಲೇಜ್; ಅಥ್ಲೆಟಿಕ್ ಕ್ರೀಡಾಕೂಟ - 2025 ಸಮಾರೋಪ

Upayuktha
0



ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹಾಗೂ ಪುತ್ತೂರು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ಪುತ್ತೂರು ತಾಲೂಕು ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ - 2025'  ಸ್ಪರ್ಧೆಯು ಅಕ್ಟೋಬರ್ 18ರಂದು ಸಂತ ಫಿಲೋಮಿನಾ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು.


ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಪುತ್ತೂರು ತಾಲೂಕು ಕ್ರೀಡಾ  ಸಂಯೋಜಕರು ಹಾಗೂ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಕರಾದ ಡಾ. ಜ್ಯೋತಿ ಮತ್ತು ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಕ್ರೀಡಾಪಟುಗಳಿಗೆ ಅಭಿನಂದನೆಯನ್ನು ಸಲ್ಲಿಸಿದರು.


ತಾಲೂಕು ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಬಾಲಕರ ವಿಭಾಗದ ವೈಯಕ್ತಿಕ ಚಾಂಪಿಯನ್ ನ್ನು ಸಂತ ಫಿಲೋಮಿನಾ ಪ. ಪೂ ಕಾಲೇಜಿನ ರೋಹನ್ ಬೋಪಣ್ಣ, ಅಭಿನ್ ಗೌಡ ಹಾಗೂ ವಿವೇಕಾನಂದ ಪ. ಪೂ ಕಾಲೇಜಿನ ಮಿಲನ್ ಮತ್ತು ಬಾಲಕಿಯರ ವಿಭಾಗದಲ್ಲಿ ವಿವೇಕಾನಂದ ಪ. ಪೂ ಕಾಲೇಜಿನ ಡಿಂಪಲ್ ಶೆಟ್ಟಿ ಪಡೆದುಕೊಂಡಿರುತ್ತಾರೆ. ಬಾಲಕ ಹಾಗೂ ಬಾಲಕಿಯರ ವಿಭಾಗದ ಪ್ರಥಮ ಸಮಗ್ರ ಪ್ರಶಸ್ತಿಯನ್ನು ಸಂತ ಫಿಲೋಮಿನಾ ಪ. ಪೂ ಕಾಲೇಜು ಹಾಗೂ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ವಿವೇಕಾನಂದ ಪ. ಪೂ ಕಾಲೇಜು ಪಡೆದುಕೊಂಡಿರುತ್ತದೆ.


ಪುತ್ತೂರು ತಾಲೂಕು ಮಟ್ಟದ ಒಟ್ಟು 8 ಪ. ಪೂ ಕಾಲೇಜಿನ 135 ಕ್ರೀಡಾಪಟುಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ತಾಲೂಕಿನ ವಿವಿಧ ಕಾಲೇಜಿನ ದೈಹಿಕ ಶಿಕ್ಷಕರು, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ.ಏಲಿಯಾಸ್ ಪಿಂಟೋ, ರಾಜೇಶ್ ಮೂಲ್ಯ, ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಪನ್ಯಾಸಕರಾದ ಲವೀಶಾ ಡಿ ಕುನ್ಹಾ ವಂದಿಸಿ, ಸವಿತಾ ಮೋಂತೇರೋ ಕಾರ್ಯಕ್ರಮವನ್ನು ನಿರೂಪಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top