ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ತೃತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿನಿ ದೀಪ್ತಿಲಕ್ಷ್ಮಿ.ಕೆ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಮಹಿಳೆಯರ ಚೆಸ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಇವರು 2025-26ನೇ ಸಾಲಿನ ರಾಷ್ಟ್ರಮಟ್ಟದ ಅಂತರ್ ವಿಶ್ವವಿದ್ಯಾನಿಲಯ ಚೆಸ್ ಟೂರ್ನಿಯಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡವನ್ನು ಪ್ರತಿನಿಧಿಸಲಿದ್ದಾರೆ. ಬೆಂಗಳೂರಿನ ಸಾಯಿರಾಂ ಕಾಲೇಜ್ ಆಫ್ ಎಂಜಿನಿಯರಿಂಗ್‌ನಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಸಮಗ್ರ ದ್ವಿತೀಯ ಸ್ಥಾನವನ್ನು ಪಡೆದು ಇವರು ತಂಡಕ್ಕೆ ಆಯ್ಕೆಗೊಂಡಿದ್ದಾರೆ.
ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ