ವಿವೇಕಾನಂದ ಕಾಲೇಜಿನಲ್ಲಿ ಪ್ರಾಧ್ಯಾಪಕರ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ

Upayuktha
0



ಪುತ್ತೂರು: ಒಬ್ಬ ಉತ್ತಮ ಶಿಕ್ಷಕ ಸಂವಹನ ಕೌಶಲ್ಯ, ವಿಷಯದ ಜ್ಞಾನ ಮತ್ತು ಪ್ರಚಲಿತ ವಿಷಯಗಳ ಅರಿವು ಹೊಂದಿರಬೇಕು. ಆಗ ಮಾತ್ರ ಆತ ವಿದ್ಯಾರ್ಥಿಗಳಿಗೂ ಬೋಧನೆ ನೀಡಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ಬೇಕಾಗುವಂತಹ ಪ್ರಾವೀಣ್ಯಯತೆಯನ್ನು ನೀಡಬೇಕಾದದ್ದು ಶಿಕ್ಷಕರ ಜವಾಬ್ದಾರಿ. ಇದರೊಂದಿಗೆ ಮಕ್ಕಳನ್ನು ನಿಭಾಯಿಸುವ ಸಾಮರ್ಥ್ಯವನ್ನು ಸಹ ಪಡೆದಿರಬೇಕು ಎಂದು ಎಸ್. ಡಿ.ಎಂ ಕಾಲೇಜಿನ ಆಂಗ್ಲ ವಿಭಾಗದ ನಿವೃತ್ತ ಮುಖ್ಯಸ್ಥ ಡಾ. ಶಂಕರನಾರಾಯಣ ಹೇಳಿದರು.


ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಇಲ್ಲಿನ ಅಧ್ಯಾಪಕರ ಅಭಿವೃದ್ಧಿ ಕೋಶ ಮತ್ತು ಐಕ್ಯೂಎಸಿ ಘಟಕದ ಸಹಯೋಗದಲ್ಲಿ ನಡೆದ ಪ್ರಾಧ್ಯಾಪಕರ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.


ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿ ಕೃಷ್ಣ ಕೆ. ಎನ್. ಮಾತನಾಡಿ, ವೃತ್ತಿಗಳಲ್ಲಿ ಶ್ರೇಷ್ಠ ವೃತ್ತಿ ಎಂದರೆ ಅದು ಶಿಕ್ಷಣ ವೃತ್ತಿ. ಸಾಮಾಜಿಕ ಮಾಧ್ಯಮಗಳಿಲ್ಲದ ಸಮಯದಲ್ಲಿ ಅಂದಿನ ಉಪನ್ಯಾಸಕರು ಶ್ರೇಷ್ಠ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಕಾಲ ಬದಲಾದಂತೆ ಶಿಕ್ಷಕರ ಯೋಚನೆಗಳ ರೀತಿಯೂ ಬದಲಾಗುತ್ತಾ ಬಂದಿದೆ. ಎಲ್ಲಾ ವೃತ್ತಿಗಳಲ್ಲೂ ಅಭಿವೃದ್ಧಿಯನ್ನು ಹೊಂದುವುದು ಮುಖ್ಯ. 


ಈ ಕಾರ್ಯಕ್ರಮವು ಶಿಕ್ಷಕರ ಮೆದುಳಿಗೆ ಕೆಲಸವನ್ನು ಕೊಡುವಲ್ಲಿ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು, ಹೊಸ ಯೋಜನೆಗಳನ್ನು ತರುವಂತೆ ಮಾಡುವಲ್ಲಿ ಸಹಕಾರಿಯಾಗಲಿದೆ. ಶಿಕ್ಷಕರು ಅವರದ್ದೇ ಆದ ತತ್ವ ಆದರ್ಶಗಳನ್ನು ಬೆಳೆಸಿಕೊಂಡು, ವಿದ್ಯಾರ್ಥಿಗಳ ಮನಸ್ಥಿತಿಯಲ್ಲಿ ಗೌರವಯುತವಾದ ಸ್ಥಾನವನ್ನು ಪಡೆಯಬೇಕು ಎಂದು ಹೇಳಿದರು.


ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀಧರ್ ನಾಯ್ಕ್, ಉಪಪ್ರಾಂಶುಪಾಲ ಶ್ರೀ ಕೃಷ್ಣ ಗಣರಾಜ ಭಟ್, ಐಕ್ಯುಎಸಿ ಘಟಕದ ಸಂಯೋಜಕಿ ಡಾ. ರವಿಕಲಾ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಅಧ್ಯಾಪಕರ ಅಭಿವೃದ್ಧಿ ಕೋಶ ಮತ್ತು ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಶಿವಪ್ರಸಾದ್ ಕೆ. ಎಸ್ ಸ್ವಾಗತಿಸಿ, ಕನ್ನಡ ವಿಭಾಗದ ಉಪನ್ಯಾಸಕಿ ಜಯಶ್ರೀ ಇಡ್ಕಿದು ನಿರ್ವಹಿಸಿದರು.



Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top