ಪುತ್ತೂರು: ಇತ್ತೀಚೆಗೆ ಉಡುಪಿಯ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜು ಇಲ್ಲಿ ನಡೆದ ಮಂಗಳೂರು ವಿಶ್ವ ವಿದ್ಯಾನಿಲಯ ಅಂತರ್ ಕಾಲೇಜು ಮಟ್ಟದ ಚೆಸ್ ಪಂದ್ಯಾಟದಲ್ಲಿ ಪುತ್ತೂರಿನ ವಿವೇಕಾನಂದ ಕಲಾ,ವಾಣಿಜ್ಯ ಮತ್ತು ವಿಜ್ಞಾನ (ಸ್ವಾಯತ್ತ) ಕಾಲೇಜಿನ ಬಾಲಕರ ತಂಡವು ಕಂಚಿನ ಪದಕ ಮತ್ತು ಬಾಲಕಿಯರ ತಂಡವು ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ.
ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್ ವಿ.ಎಸ್ ಮಾರ್ಗದರ್ಶನವನ್ನು ನೀಡಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

.png)
