ಮಂಗಳೂರು: 1971 ರ ಭಾರತ ಪಾಕ್ ಯುದ್ಧದಲ್ಲಿ ಭಾಗವಹಿಸಿದ ಯುದ್ಧ ವೀರ ಗರೋಡಿ ತಿಮ್ಮಪ್ಪ ಆಳ್ವ ಗುರುವಾರ ಸಂಜೆ ಮಂಗಳೂರಿನ ಲೋಹಿತ್ ನಗರದ ತಮ್ಮ ನಿವಾಸದಲ್ಲಿ ನಿಧನ ಹೊಂದಿದರು. ಅವರಿಗೆ 85 ವರ್ಷ ವಯಸ್ಸಾಗಿತ್ತು. ಅವರು ಪತ್ನಿ, ಮಗಳು, ಮೊಮ್ಮಕ್ಕಳನ್ನು ಆಗಲಿದ್ದಾರೆ.
ಕುಟುಂಬಸ್ಥರು ಮೃತರ ದೇಹವನ್ನು ನಾಳೆ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾನ ಮಾಡಲಾಗುವುದು ಕುಟುಂಬಸ್ಥರು ತಿಳಿಸಿದ್ದಾರೆ. ಇತ್ತೀಚೆಗೆ ಅವರ ಅನುಭವ ಕಥನ ಗರೋಡಿ ಮನೆಯಿಂದ ಸೇನಾ ಗರಡಿಗೆ ಪ್ರಕಟವಾಗಿತ್ತು.
ತುಳುನಾಡಿನ ಕೃಷಿ ಕುಟುಂಬವೊಂದರಲ್ಲಿ ಜನಿಸಿದ ಯುವಕ ದೇಶ ಕಾಯುವ ಸೈನಿಕನಾಗಿ 1971ರ ಯುದ್ಧದಲ್ಲಿ ಹೆಲಿಕಾಪ್ಟರ್ ನಲ್ಲಿ ಯುದ್ಧ ಶಿಬಿರಕ್ಕೆ ಪ್ರಯಾಣಿಸುವ ವೇಳೆ ಪಾಕ್ ಸೈನಿಕರ ಫಿರಂಗಿ ದಾಳಿಗೆ ತುತ್ತಾಗಿ ಚಿತ್ತಗಾಂಗ್ ಪ್ರದೇಶದ ಕಾಡಿನಲ್ಲಿ ಬಿದ್ದು ಜೀವನ್ಮರಣ ಹೋರಾಟ ನಡೆಸಿ ಬದುಕಿ ಉಳಿದ ಅನುಭವ ಕಥನ ಕಿರು ಪುಸ್ತಕವಾಗಿ ಪ್ರಕಟವಾಗಿದೆ.
1971ರ ಭಾರತ -ಪಾಕ್ ಯುದ್ಧದಲ್ಲಿ, ಭಾರತ ಜಗತ್ತು ಬೆರಗಾಗುವ ರೀತಿಯಲ್ಲಿ ಜಯ ಗಳಿಸಿತು. ದೇಶದ ಅಂದಿನ ಪ್ರಧಾನಿ ಇಂದಿರಾಗಾಂಧಿಯವರ ದಿಟ್ಟ ನಿರ್ಧಾರ, ಅಂತಾರಾಷ್ಟ್ರೀಯ ಸಂಬಂಧಗಳನ್ನು ನಿಭಾಯಿಸಿದ ಚಾಣಾಕ್ಷತೆ, ಸೇನಾ ದಂಡನಾಯಕ ಮಾಣಿಕ್ ಶಾ ರೂಪಿಸಿದ ಯುದ್ಧ ತಂತ್ರ ಜೊತೆಗೆ ಸಾವಿರಾರು ಭಾರತೀಯ ಸೇನಾ ಜವಾನರ ಬಲಿದಾನದಿಂದ ವಿಶ್ವದ ಎದುರು ಪ್ರಜಾಪ್ರಭುತ್ವ ಭಾರತ ದೇಶ ತನ್ನ ಅಂತಾರಾಷ್ಟ್ರೀಯ ಬದ್ದತೆ ಮತ್ತು ನಾಯಕತ್ವವನ್ನು ಸ್ಪಷ್ಟಪಡಿಸಲು ಸಾಧ್ಯಮಾಡಿಸಿದ ಯುದ್ಧ ಅದು. ಪಾಕ್ ವಿರುದ್ಧದ ಮೂರೂ ಯುದ್ಧದಲ್ಲಿ ಭಾಗವಹಿಸಿದ್ದ ಹಿರಿಮೆ ಜಿ.ಟಿ ಆಳ್ವರದ್ದು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ