ಕುಂದಾಪುರ: ರಾಜ್ಯ ಸರ್ಕಾರದ ಮಾಹಿತಿ ತಂತ್ರಜ್ಞಾನ ಇಲಾಖೆಯ ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ (ಕಿಟ್ಸ್) ಏರ್ಪಡಿಸಿದ್ದ ಉಡುಪಿ ಜಿಲ್ಲಾಮಟ್ಟದ ಗ್ರಾಮೀಣ ಐ.ಟಿ.ರಸಪ್ರಶ್ನೆ ಸ್ಪರ್ಧೆಯಲ್ಲಿ ಯಡಾಡಿ ಮತ್ಯಾಡಿಯಲ್ಲಿರುವ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಮನ್ವಿತ್ ಬಿ. ಉತ್ತಮ ಪ್ರದರ್ಶನ ನೀಡಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಯು ಕೆ. ಸುರೇಶ್ ಭಂಡಾರಿ ಹಾಗೂ ಜಯಶ್ರೀ ದಂಪತಿಯ ಪುತ್ರ.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಛೇರಿ ಸಹಯೋಗದಲ್ಲಿ ಈ ಸ್ಪರ್ಧೆ ಆಯೋಜನೆಗೊಂಡಿತ್ತು.
ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಸಂಸ್ಥೆಯ ಮುಖ್ಯೋಪಾಧ್ಯಾಯ ಪ್ರದೀಪ್ ಕೆ. ವಿಜೇತ ವಿದ್ಯಾರ್ಥಿಯನ್ನು ಅಭಿನಂದಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

 
 
 
 
 
 
 
 
 
 
 

 
