ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ 2025-26ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ನಡೆಯಿತು.
ಮುಖ್ಯ ಅತಿಥಿ, ಉಜಿರೆ ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯದ (ಬಿ.ಎಡ್.) ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ವಿದ್ಯಾಶ್ರೀ ಅವರು ಮಾತನಾಡಿ, ಶ್ರಮ, ನಿಷ್ಠೆ, ಶಿಸ್ತು ಜೀವನದ ಯಶಸ್ಸಿಗೆ ಕಾರಣವಾಗುತ್ತದೆ. ಆತ್ಮವಿಶ್ವಾಸ, ಛಲ ಇದ್ದಾಗ ಯಾವುದೇ ಸಾಧನೆ ಮಾಡಬಹುದು ಎಂದರು.
ವಿದ್ಯಾರ್ಥಿ ಸಂಘಟನೆಗಳಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಉನ್ನತ ಹುದ್ದೆಯನ್ನು ಹಾಗೂ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಆತ್ಮಸ್ಥೈರ್ಯ ಬರುತ್ತದೆ ಎಂದು ಅವರು ಹೇಳಿದರು. ಐ.ಟಿ.ಐ. ಕಾಲೇಜಿನ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿ, ಶುಭಕೋರಿದರು.
ಇದೇ ಸಂದರ್ಭದಲ್ಲಿ, ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ 58ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ ಪ್ರಯುಕ್ತ ಆಯೋಜಿಸಿದ್ದ ಕ್ವಿಜ್, ಭಾಷಣ ಸ್ಪರ್ಧೆ ಮತ್ತು ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಬಹುಮಾನ ನೀಡಲಾಯಿತು.
ದೀಪಾವಳಿ ಹಬ್ಬದ ಪ್ರಯುಕ್ತ ನಡೆದ ಗೂಡುದೀಪ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಬಹುಮಾನ ನೀಡಲಾಯಿತು. ವಿದ್ಯಾರ್ಥಿ ಸಂಘದ ನಾಯಕಿ ಅಪೇಕ್ಷಾ ಹಾಗೂ ಇತರ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ