ಕಾಸರಗೋಡು: ಸಹಕಾರ ಭಾರತಿಯ ಕೇರಳ ಪ್ರಾಂತ್ಯ ಮಟ್ಟದ ದ್ವಿ ದಿನ ಅಧ್ಯಯನ ಶಿಬಿರ ಎರ್ನಾಕುಲಂ ಪಾವಕುಳಂನಲ್ಲಿ ಇಂದು ಆರಂಭಗೊಂಡಿದೆ. ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಪ್ರಾಂತ್ಯ ಅಧ್ಯಕ್ಷ ಅಡ್ವೋಕೇಟ್ ಕರುಣಾಕರನ್ ನಂಬಿಯಾರ್ ಅಧ್ಯಕ್ಷತೆ ವಹಿಸಿದ್ದು ಕೇರಳ ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶ ಜಸ್ಟಿಸ್ ಟಿ. ರವೀಂದ್ರನಾಥ್ ದೀಪ ಬೆಳಗಿಸಿ ಉದ್ಘಾಟಿಸಿದರು.
ರಾ.ಸ್ವ. ಸಂಘದ ದಕ್ಷಿಣ ಕ್ಷೇತ್ರೀಯ ಪ್ರಚಾರಕ್ ಟಿ.ಎನ್. ಹರಿಕೃಷ್ಣನ್ ಅವರು ಕಾರ್ಯಕರ್ತರ ಕುರಿತು ಮಾರ್ಗದರ್ಶನ ನೀಡಿದರು. ಸಹಕಾರ ಭಾರತಿಯ ಅಖಿಲ ಭಾರತೀಯ ಸಂಘಟನಾ ಕಾರ್ಯದರ್ಶಿ ಸಂಜಯ್ ಪಾಚ್ಪರ್, ಪ್ರಾಂತ್ಯ ಕಾರ್ಯದರ್ಶಿ ಶ್ರೀಮತಿ ರಮಾ ಹರೀಶ್ ಮುಂತಾದವರು ಉಪಸ್ಥಿತರಿದ್ದರು. ಕೇರಳ ಪ್ರಾಂತ್ಯ ಪ್ರಧಾನ ಕಾರ್ಯದರ್ಶಿ ರಾಜಶೇಖರನ್ ಸ್ವಾಗತಿಸಿ, ಶ್ರೀಮತಿ ರಮಾ ಹರೀಶ್ ವಂದನಾರ್ಪಣೆ ಮಾಡಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ