ಶಿವಮೊಗ್ಗ: ಕನ್ನಡ ಸಾರಸ್ವತ ಲೋಕದ ಶ್ರೇಷ್ಠ ವಿಮರ್ಶಕರೂ ಹಾಗು ಸಾಂಸ್ಕೃತಿಕ ಚಿಂತಕರೆಂದು ಪ್ರಸಿದ್ಧರಾದ ಡಾ. ರಾಜೇಂದ್ರ ಚೆನ್ನಿ ಅವರಿಗೆ 2025 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಬಂದಿರುವುದಕ್ಕೆ ಮಾನಸ ಸಮೂಹ ಸಂಸ್ಥೆಗಳು ಅಭಿನಂದಿಸುತ್ತದೆ.
2017 ರಿಂದ ಮಾನಸ ಸಾಂಸ್ಕೃತಿಕ ಅಧ್ಯಯನ ಕೇಂದ್ರ ನಿರ್ದೇಶಕರಾಗಿ ಹಾಗೂ ಕಟೀಲ್ ಅಶೋಕ್ ಪೈ ಶೈಕ್ಷಣಿಕ ಸಂಸ್ಥೆಗಳ ಸಲಹಾ ಮಂಡಳಿಯ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಡಾ.ಯು.ಆರ್. ಅನಂತಮೂರ್ತಿ ಅವರು ಡಾ. ರಾಜೇಂದ್ರ ಚೆನ್ನಿ ಅವರು ಕನ್ನಡದ ಶ್ರೇಷ್ಠ ಮನಸ್ಸುಗಳಲ್ಲಿ ಒಬ್ಬರು ಎಂದು ವರ್ಣಿಸಿದ್ದಾರೆ. ಎರಡು ಬಾರಿ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿಯ ಪುಸ್ತಕ ಪ್ರಶಸ್ತಿ, ವರ್ಧಮಾನ ಉದಯೋನ್ಮುಖ ಪ್ರಶಸ್ತಿ, ಜಿ.ಎಸ್.ಶಿವರುದ್ರಪ್ಪ ಪ್ರಶಸ್ತಿ, ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ, ಬಿ.ಹೆಚ್ ಶ್ರೀಧರ ಪ್ರಶಸ್ತಿ, ಕಾವ್ಯಾನಂದ ಪ್ರಶಸ್ತಿ, ಇನ್ನು ಹಲವು ಪ್ರಶಸ್ತಿಗಳು ಬಂದಿರುತ್ತವೆ.
ಪ್ರಶಸ್ತಿಯನ್ನು ಸ್ವೀಕರಿಸುತ್ತಿರುವ ಡಾ. ರಾಜೇಂದ್ರ ಚೆನ್ನಿ ಅವರಿಗೆ ಮಾನಸ ಟ್ರಸ್ಟ್ ನ ನಿರ್ದೇಶಕರಾದ ಡಾ. ರಜನಿ ಎ ಪೈ, ಶೈಕ್ಷಣಿಕ ನಿರ್ದೇಶಕರಾದ ಡಾ. ಪ್ರೀತಿ. ವಿ. ಶಾನಭಾಗ್, ಮಾನಸ ಟ್ರಸ್ಟ್ ನ ಟ್ರಸ್ಟಿಯಾಗಿರುವ ಡಾ. ವಾಮನ್ ಎಂ ಶಾನ್‌ಭಾಗ್, ಆಡಳಿತಾಧಿಕಾರಿಗಳಾದಂತಹ ಪ್ರೊ. ರಾಮಚಂದ್ರ ಬಾಳಿಗ ಇವರು ಅಭಿನಂದಿಸಿದ್ದಾರೆ.
ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಧ್ಯಾಕಾವೇರಿ ಕೆ, ಕಟೀಲ್ ಅಶೋಕ್ ಪೈ ಮೆಮೋರಿಯಲ್ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್, ಕಟೀಲ್ ಅಶೋಕ್ ಪೈ ಮೆಮೋರಿಯಲ್ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಮಲ್ಲಿಕಾರ್ಜುನ ಎಸ್, ಡಾ. ಪ್ರವೀಣ್, ಸಿ.ಇ.ಓ. ಮಾನಸ ಸಂಸ್ಥೆ, ಇವರು ಹಾಗೂ ಸಿಬ್ಬಂದಿ ವರ್ಗದವರು ಸಹ ಅಭಿನಂದಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


