ರಜತ ಮಹೋತ್ಸವ ಆಚರಣೆ: ಪೇಸ್ ಸಿಲ್ವಿಯೋರಾ 2025

Upayuktha
0


ಮಂಗಳೂರು: ಪೇಸ್ ಗ್ರೂಪ್ ತನ್ನ ರಜತ ಮಹೋತ್ಸವದ ಅಂಗವಾಗಿ “ಸಿಲ್ವಿಯೋರಾ 2025” ಎಂಬ ಶೀರ್ಷಿಕೆಯಲ್ಲಿ ಅತ್ಯಂತ ಸ್ಮರಣೀಯ ಕ್ಷಣವನ್ನು 2025ರ ಅಕ್ಟೋಬರ್ 14ರಂದು ಪೇಸ್ ಜ್ಞಾನ ನಗರದಲ್ಲಿ ಅಧಿಕೃತ ಬ್ಯಾನರ್ ಅನಾವರಣದೊಂದಿಗೆ ಆಚರಿಸಿತು. ಈ ಕಾರ್ಯಕ್ರಮವು ಸಂಸ್ಥೆಯ 25 ವರ್ಷದ ಯಶಸ್ವಿ ಪ್ರಯಾಣದ ಮಹತ್ವದ ಮೈಲುಗಲ್ಲುಗಳನ್ನು ಗುರುತಿಸಿತು.


ಕಾರ್ಯಕ್ರಮವು ಮಧ್ಯಾಹ್ನ 3:30ಕ್ಕೆ ಪ್ರಾರಂಭವಾಯಿತು. ಪೇಸ್ ಟ್ರಸ್ಟ್‌ನ  ಮ್ಯಾನೇಜಿಂಗ್ ಟ್ರಸ್ಟಿ ಅಬ್ದುಲ್ಲಾ ಇಬ್ರಾಹಿಂ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ತಮ್ಮ ಭಾಷಣದಲ್ಲಿ ಅವರು “ಸಿಲ್ವಿಯೋರಾ 2025” ಬ್ಯಾನರ್ ಅನ್ನು ಅನಾವರಣಗೊಳಿಸಿ, ಮುಂದಿನ ಮೂರು ತಿಂಗಳುಗಳ ಕಾಲ ನಡೆಯುವ ವೈಭವಶಾಲಿ ಉತ್ಸವಗಳ ಸರಣಿಗೆ ಅಧಿಕೃತ ಚಾಲನೆ ನೀಡಿದರು.


ಪಿ.ಎ. ಪ್ರಥಮ ದರ್ಜೆ  ಕಾಲೇಜಿನ ಪ್ರಾಂಶುಪಾಲ ಡಾ. ಸರ್ಫ್ರಾಜ್ ಜೆ ಹಾಸಿಮ್ ಅವರು ಸಭಿಕರನ್ನು ಸ್ವಾಗತಿಸಿ, ರಜತ ಮಹೋತ್ಸವದ ಸಂಭ್ರಮದ ಕುರಿತು ಉತ್ಸಾಹ ವ್ಯಕ್ತಪಡಿಸಿದರು. ಪಿ.ಎ. ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ರಮೀಸ್ ಎಂ.ಕೆ. ಅವರು ಸಂಸ್ಥೆಯ 25 ವರ್ಷದ ಪ್ರಯಾಣದ ಕುರಿತು ಸ್ಮರಣೀಯ ಅನುಭವವನ್ನು ತಿಳಿಸಿ, ಭವಿಷ್ಯದ ಗುರಿಗಳನ್ನು ಹಂಚಿಕೊಂಡರು.


ಕಾರ್ಯಕ್ರಮದಲ್ಲಿ ಪೇಸ್ ಗ್ರೂಪ್‌ನ ವಿವಿಧ ಘಟಕಗಳ ಪ್ರಾಂಶುಪಾಲರು, ಬೋಧಕ ವರ್ಗ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಎಲ್ಲರೂ ಸಂಸ್ಥೆಯ ಇತಿಹಾಸವನ್ನು ಸ್ಮರಿಸಿ, ಮುಂಬರುವ ವಿಶ್ವವಿದ್ಯಾನಿಲಯದ ಗುರಿಯನ್ನು ಸಾಧಿಸಲು ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಕಾರ್ಯಕ್ರಮದ ಕೊನೆಯಲ್ಲಿ ಪಿ.ಎ. ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ ಡಾ. ಸಲೀಮುಲ್ಲಾ ಖಾನ್ ಅವರು ಸರ್ವರಿಗೂ ಧನ್ಯವಾದ ಸಲ್ಲಿಸಿದರು.


ರಜತ ಮಹೋತ್ಸವದ ಅಂಗವಾಗಿ ನಾನಾ ಸಾಂಸ್ಕೃತಿಕ, ಶೈಕ್ಷಣಿಕ ಮತ್ತು ಸೃಜನಾತ್ಮಕ ಕಾರ್ಯಕ್ರಮ ಗಳನ್ನು ಆಯೋಜಿಸಲಾಗಿದ್ದು, ಈ ಬ್ಯಾನರ್ ಅನಾವರಣ ಕಾರ್ಯಕ್ರಮದ ಮೂಲಕ ಅಧಿಕೃತವಾಗಿ ಚಾಲನೆ ನೀಡಲಾಯಿತು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top