ಕಾಸರಗೋಡು: ಶ್ರೀ ಧರ್ಮಸ್ಥಳ ಧರ್ಮಾಧಿಕಾರಿಗಳು, ಪೂಜ್ಯ ಖಾವಂದರಾದ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 58ನೇ ಪಟ್ಟಾಭಿಷೇಕದ ವರ್ಧಂತಿ ಮಹೋತ್ಸವದ ಸುಸಂದರ್ಭದಲ್ಲಿ 37 ವರುಷಗಳಿಂದ ಶ್ರೀ ಧರ್ಮಸ್ಥಳ ಮೇಳದಲ್ಲಿ ಭಾಗವತರಾಗಿರುವ, ಗಡಿನಾಡು ಕಾಸರಗೋಡಿನ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ರಾಮಕೃಷ್ಣ ಮಯ್ಯ ಸಿರಿಬಾಗಿಲು ಅವರಿಗೆ ವಿಶೇಷ ವೇದಿಕೆಯಲ್ಲಿ ಸನ್ಮಾನ ಕಾರ್ಯಕ್ರಮವು ಹೆಗ್ಗಡೆಯವರಿಂದ ನಡೆಯಿತು.
ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶ್ರೀ ಸಿದ್ದಲಿಂಗ ಮಹಾ ಸ್ವಾಮಿಯವರು, ಶ್ರೀಮತಿ ಹೇಮಾವತಿ ವಿ. ಹೆಗ್ಗಡೆಯವರು, ಧರ್ಮಸ್ಥಳ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್, ಡಿ. ಸುರೇಂದ್ರ ಕುಮಾರ್, ಬೆಳ್ತಂಗಡಿ ಶಾಸಕರಾದ ಹರೀಶ ಪೂಂಜ ಮುಂತಾದವರು ಉಪಸ್ಥಿತರಿದ್ದರು. ಸಿರಿಬಾಗಿಲು ಮಯ್ಯರವರು ಕುಟುಂಬ ಸಮೇತರಾಗಿ ಸನ್ಮಾನ ಸ್ವೀಕರಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


