ಅಬ್ಬಕ್ಕ 500 ಪ್ರೇರಣಾದಾಯಿ ಉಪನ್ಯಾಸ ಸರಣಿ
ಮಂಗಳೂರು: ಮಂಗಳೂರಿನ ಪಾದುವ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್‌ಮೆಂಟ್‌ನ ಭಾಷಾ ವಿಭಾಗ ಹಾಗೂ ಯೂತ್ ರೆಡ್ ಕ್ರಾಸ್, ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಜಂಟಿಯಾಗಿ ಅಬ್ಬಕ್ಕ 500 ಪ್ರೇರಣಾದಾಯಿ ಉಪನ್ಯಾಸ ಸರಣಿಯ 83ನೆ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕ ಡಾ. ಮಂಜುನಾಥ ಪಟ್ಟಾಬಿ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಚರಿತ್ರೆಯನ್ನು ತಿಳಿದುಕೊಳ್ಳಬೇಕಾದ ಅವಶ್ಯಕತೆ ಇದೆ. ಆ ಮೂಲಕ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಯಶಸ್ಸನ್ನು ಸಾಧಿಸಲು ಸಾಧ್ಯ ಎಂದರು.
ಸಂಪನ್ಮೂಲ ವ್ಯಕ್ತಿಯಾಗಿ ಇಂಡಿಯನ್ ಓವರ್‌ಸೀಸ್ ಬ್ಯಾಂಕಿನ ನಿವೃತ್ತ ಹಿರಿಯ ಪ್ರಬಂಧಕ ಬಿ.ಕೆ. ಕುಮಾರ್ ಮಾತನಾಡಿ, ರಾಣಿ ಅಬ್ಬಕ್ಕ ಪೋರ್ಚುಗೀಸರನ್ನು ಹಿಮ್ಮೆಟ್ಟಿಸಿ ಉಳ್ಳಾಲ ಮತ್ತು ಕರಾವಳಿ ಪ್ರದೇಶವನ್ನು 40 ವರ್ಷಗಳ ಕಾಲ ಸ್ವತಂತ್ರವಾಗಿ ಉಳಿಸಿಕೊಂಡ ಬಗ್ಗೆ ವಿವರಿಸಿದರು. ಹಾಗಾಗಿ, ಆಕೆಯಲ್ಲಿದ್ದ ದೇಶಪ್ರೇಮ ಇಂದಿನ ಯುವಜನಾಂಗಕ್ಕೆ ಪ್ರೇರಕ ಎಂದರು.
ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಇದರ ಕಾರ್ಯದರ್ಶಿ ರಾಜೇಶ್ ಕುಮಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದ ಕೊನೆಯಲ್ಲಿ ರಾಣಿ ಅಬ್ಬಕ್ಕನ ಜೀವನವನ್ನು ಕುರಿತ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಾದುವ ಕಾಲೇಜಿನ ಉಪಪ್ರಾಂಶುಪಾಲ ಪ್ರೊ. ರೋಶನ್ ಸಾಂತುಮಯೊರ್ ವಹಿಸಿದ್ದರು. ಕಾರ್ಯಕ್ರಮದ ಸಂಯೋಜಕ ಭಾಷಾ ವಿಭಾಗದ ಪ್ರಾಧ್ಯಾಪಕ ಪ್ರೊ. ಅಕ್ಷಯ ಶೆಟ್ಟಿ ಹಾಗೂ ಯೂತ್ ರೆಡ್ ಕ್ರಾಸ್‌ನ ಸಂಯೋಜಕ ಪ್ರೊ. ಸಂತೋಷ್ ಕುಮಾರ್ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ಕುಮಾರಿ ವರ್ಷ ಅತಿಥಿಗಳನ್ನು ಸ್ವಾಗತಿಸಿದರು. ಕುಮಾರಿ ರೇಷ್ಮ ವಂದಿಸಿದರು. ಕುಮಾರಿ ನಾಗರತ್ನ ಕಾರ್ಯಕ್ರಮ ನಿರ್ವಹಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

