ಬಂಟ್ವಾಳ: ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮಾಡಲು ಕರ್ನಾಟಕ ರಾಜ್ಯ ಸರಕಾರದಲ್ಲಿ ಹಣಕಾಸಿನ ಕೊರತೆ ತಲೆದೋರಿದ್ದು ಯೋಜನೆ ಕಾರ್ಯಗತಕ್ಕಾಗಿ ಹಣಕಾಸು ನೆರವಿಗೋಸ್ಕರ ಬಡವರ ಬಿಪಿಎಲ್ ಪಡಿತರ ಚೀಟಿಗಳ ಮೇಲೆ ರಾಜ್ಯ ಸರಕಾರ ಕಣ್ಣು ಹಾಕಿದ್ದು ವಿವಿಧ ಕಾರಣಗಳನ್ನು ನೀಡಿ ಬಂಟ್ವಾಳದಲ್ಲಿ 4830 ಸೇರಿದಂತೆ ಪ್ರತಿ ತಾಲೂಕಿನಾದ್ಯಂತ ಸಾವಿರಾರು ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲು ಹೊರಟಿರುವ ರಾಜ್ಯ ಸರಕಾರದ ನಡೆಯನ್ನು ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರಭಾಕರ ಪ್ರಭು ತೀವ್ರವಾಗಿ ಖಂಡಿಸಿದ್ದಾರೆ.
ಹಲವಾರು ಮಂದಿ ಬಿಪಿಎಲ್ ಪಡಿತರ ಕಾರ್ಡ್ ದಾರರು ತಮ್ಮ ವಾಸ್ತವದ ಮನೆ ನಿರ್ಮಾಣಕ್ಕಾಗಿ ಬ್ಯಾಂಕ್ ಗಳಿಂದ ಸಾಲ ಪಡೆಯುವ ಉದ್ದೇಶಕ್ಕಾಗಿ ಆದಾಯ ತೆರಿಗೆ ರಿಟರ್ನ್ ಫೈಲ್ ಮಾಡಿಕೊಂಡು ಸಾಲ ಪಡೆದು ಮನೆ ನಿರ್ಮಿಸಿಕೊಂಡು ವಾಸ್ತವ ವಾಗುವ ಸಮಯದಲ್ಲಿ ಕೇವಲ ಐಟಿ ರಿಟರ್ನ್ ಮಾಡಿದ ಉದ್ದೇಶವನ್ನು ಇಟ್ಟುಕೊಂಡು ಆದಾಯ ಹೆಚ್ಚಳ ವಾಗಿದೆ ಎಂಬ ಕಾರಣ ನೀಡಿ ಬಿಪಿಎಲ್ ಪಡಿತರ ಕಾರ್ಡ್‌ಗಳನ್ನು ರದ್ದು ಮಾಡಲು ಹೊರಟಿರುವುದು ಅಸಂಬದ್ಧವಾಗಿದ್ದು ಇದು ಸರಿಯಾದ ಕ್ರಮವಲ್ಲ? ಅಂದರೆ ಇಂತಹ ಕುಟುಂಬಗಳು ಈಗಲೂ ಕಷ್ದದ ಪರಿಸ್ಥಿತಿಯಲ್ಲಿ ಜೀವನ ಸಾಗಿಸುತ್ತಿವೆ. ಈ ಬಗ್ಗೆ ಅಧಿಕಾರಿಗಳು ಸಮಗ್ರವಾಗಿ ಪರಿಶೀಲನೆ ಮಾಡಿಯೇ ರದ್ದು ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು ಎಂದು ಅವರು ಅಧಿಕಾರಿಗಳಲ್ಲಿ ವಿನಂತಿಸಿದ್ದಾರೆ.
ಬಂಟ್ವಾಳ ತಾಲೂಕಿನಲ್ಲಿಯೇ ಸುಮಾರು 4830 ಬಿಪಿಎಲ್ ಪಡಿತರ ಕಾರ್ಡ್ ಗಳು ರದ್ದು ಗೊಳ್ಳುವ ಪಟ್ಟಿಯಲ್ಲಿದ್ದು ಸುಮಾರು 500 ರಷ್ಟು ಬಿಪಿಎಲ್ ಕಾರ್ಡ್ ಗಳು ಈಗಾಗಲೇ ರದ್ದು ಗೊಂಡಿರುತ್ತವೆ ಎಂದು ತಿಳಿದುಬಂದಿದೆ.ಈ ರೀತಿಯಲ್ಲಿ ಬಿಪಿಎಲ್ ಪಡಿತರ ಕಾರ್ಡ್ ಗಳು ರದ್ದುಗೊಳ್ಳುವುದರಿಂದ ಸರಕಾರದಿಂದ ಸಿಗುವಂತಹ ವಿವಿಧ ಯೋಜನೆಗಳು ಮತ್ತು ಸವಲತ್ತುಗಳಿಂದ ಸಾವಿರಾರು ಕುಟುಂಬಗಳು ವಂಚಿತವಾಗಲಿವೆ.
ಈ ನಿಟ್ಟಿನಲ್ಲಿ ಈಗಾಗಲೇ ರದ್ದತಿಗೆ ಗುರುತಿಸಿರುವ ಬಿಪಿಎಲ್ ಕಾರ್ಡ್ ಗಳನ್ನು ಐಟಿ ರಿಟರ್ನ್ ಫೈಲ್ ಕಾರಣದಿಂದ ವಿನಾಯಿತಿ ನೀಡಿ ಯಥಾ ಸ್ಥಿತಿಯಲ್ಲಿ ಬಿಪಿಎಲ್ ಕಾರ್ಡ್ ಗಳು ಮುಂದುವರೆಸಲು ಈ ಮೂಲಕ ಸರಕಾರವನ್ನು ಒತ್ತಾಯಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ