ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆ: ವಿದ್ಯಾರಣ್ಯದ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Upayuktha
0


ಕುಂದಾಪುರ: ಮೂಡುಬಿದ್ರಿಯ ಆಳ್ವಾಸ್ ಪಿಯು ಕ್ಯಾಂಪಸ್‌ನಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಅಬಾಕಸ್ ಮತ್ತು ಮನೋ-ಅಂಕಗಣಿತ (ಮೆಂಟಲ್‌ ಅರಿಥ್ ಮೆಟಿಕ್) ಸ್ಪರ್ಧೆಯಲ್ಲಿ ವಿದ್ಯಾರಣ್ಯ ಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿದ್ದಾರೆ. 5ನೇ ತರಗತಿಯ ಕೆ.ಅದ್ವಿಕ್ ಶೆಟ್ಟಿ, 6ನೇ ತರಗತಿಯ  ದ್ರಿಶಾ ಎಚ್.ಶೆಟ್ಟಿ ಒಂದನೇ ವಿಭಾಗದ ಸ್ಪರ್ಧೆಯಲ್ಲಿ ಮೊದಲ ಸ್ಥಾನದೊಂದಿಗೆ ವಿಜೇತರಾದ ವಿದ್ಯಾರ್ಥಿಗಳು.


ಕೆ.ಅದ್ವಿಕ್ ಶೆಟ್ಟಿ ಹೆಸ್ಕತ್ತೂರು ಕೃಷ್ಣ ಶೆಟ್ಟಿ ಹಾಗೂ ದೀಪಾ ದಂಪತಿಯ ಪುತ್ರ, ದ್ರಿಶಾ ಎಚ್.ಶೆಟ್ಟಿ  ಜನ್ನಾಡಿಯ ಹರ್ಷವರ್ಧನ್‌ ಶೆಟ್ಟಿ  ಹಾಗೂ ಸೌಮ್ಯ ಹೆಚ್‌ ಶೆಟ್ಟಿ ದಂಪತಿಯ ಪುತ್ರಿ.


ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈ.ಲಿ. ಆಯೋಜಿಸಿದ್ದ 20ನೇ ರಾಜ್ಯಮಟ್ಟದ ಈ ಪ್ರತಿಷ್ಠಿತ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ 2000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. 


ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಪ್ರದೀಪ್. ಕೆ ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ. ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಬೋಧಕ ಬೋಧಕೇತರ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.




ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top