ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣದಲ್ಲಿ ಶಾಸ್ತ್ರೀಯ ಸಂಗೀತದ ಪಾತ್ರ ಮಹತ್ವದ್ದು: ಶ್ರೀಧರ ಹೊಳ್ಳ

Upayuktha
0


ಸುರತ್ಕಲ್‌: ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣದಲ್ಲಿ ಶಾಸ್ತ್ರೀಯ ಸಂಗೀತ ಮಹತ್ತರ ಪಾತ್ರವನ್ನು ನಿರ್ವಹಿಸುತ್ತದೆ. ಭಾವ ಪೂರ್ವಕವಾಗಿ ಹಾಡಿದಾಗ ಸಂಗೀತದ ಅನುಸಂಧಾನ ಸಾಧ್ಯವಾಗುತ್ತದೆ ಎಂದು ಮಂಗಳೂರಿನ ಭರತಾಂಜಲಿ (ರಿ)ಯ ಸ್ಥಾಪಕರು ಹಾಗೂ ಗುರು ಶ್ರೀಧರ ಹೊಳ್ಳ ನುಡಿದರು.


ಅವರು ಮಣಿ ಕೃಷ್ಣಸ್ವಾಮಿ ಅಕಾಡೆಮಿ (ರಿ) ಮತ್ತು ಸುರತ್ಕಲ್‌ನ ನಾಗರಿಕ ಸಲಹಾ ಸಮಿತಿ (ರಿ) ಸಹಭಾಗಿತ್ವದಲ್ಲಿ ಸುರತ್ಕಲ್ ನ ಅನುಪಲ್ಲವಿಯ ಶ್ರೀ ವಿಶ್ವೇಶ ತೀರ್ಥ ಸಭಾಂಗಣದಲ್ಲಿ ನಡೆದ ದೀಪಾವಳಿ ವಿಶೇಷ  ಉದಯ ರಾಗ 62 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.


ಗಣೇಶ್ ಐತಾಳ್ ಕೃಷ್ಣಾಪುರ ಸಂಗೀತ ಕಚೇರಿ ನಡೆಸಿದರು. ಕೊಳಲಿನಲ್ಲಿ ಪ್ರಣವ್ ಅಡಿಗ ಉಡುಪಿ ಮತ್ತು ತಬಲದಲ್ಲಿ ಕಾರ್ತಿಕ್ ಭಟ್ ಇನ್ನಂಜೆ  ಸಹಕರಿಸಿದರು.


ಹಿರಿಯ ಯಕ್ಷಗಾನ ಭಾಗವತ ವೆಂಕಟರಮಣ ಐತಾಳ್ ಕೃಷ್ಣಾಪುರ, ನಾಗರಿಕ ಸಲಹಾ ಸಮಿತಿಯ ಅಧ್ಯಕ್ಷ. ಕೆ. ರಾಜಮೋಹನ ರಾವ್ ಉಪಸ್ಥಿತರಿದ್ದರು. ಸುರತ್ಕಲ್ ರೋಟರಿಯ ಸೇವಾ ನಿರ್ದೇಶಕ ಕೃಷ್ಣಮೂರ್ತಿ ಸ್ವಾಗತಿಸಿದರು. ಮಣಿ ಕೃಷ್ಣಸ್ವಾಮಿ ಅಕಾಡೆಮಿಯ ಕಾರ್ಯದರ್ಶಿ ಪಿ. ನಿತ್ಯಾನಂದ ರಾವ್ ವಂದಿಸಿದರು.



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top