ಭಗವದ್ಗೀತಾ ಡಿಪ್ಲೊಮಾ ಕೋರ್ಸ್ ಉದ್ಘಾಟನೆ

Chandrashekhara Kulamarva
0


ಉಡುಪಿ: ನಿಟ್ಟೆ ವಿಶ್ವವಿದ್ಯಾಲಯದ ಭಾರತೀಯ ಜ್ಞಾನ ವ್ಯವಸ್ಥಾ ಕೇಂದ್ರ (IKS) ದಿಂದ ಇದೇ ಬರುವ ಡಿಸೆಂಬರ್ ತಿಂಗಳಲ್ಲಿ ಪ್ರಾರಂಭಗೊಳ್ಳಲಿರುವ ಭಗವದ್ಗೀತಾ ಡಿಪ್ಲೊಮಾ ಕೋರ್ಸ್ ಅನ್ನು ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಉದ್ಘಾಟಿಸಿದರು. ಒಂದು ವರ್ಷ ಅವಧಿಯ ಒಟ್ಟು ಐದು ಪತ್ರಿಕೆಗಳನ್ನು ಒಳಗೊಂಡ ಈ ಡಿಪ್ಲೊಮಾ ಕೋರ್ಸ್‌ನ ಪಾಠದ ವ್ಯವಸ್ಥೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಆನ್ಲೈನ್ ಮೂಲಕ ನಡೆಯಲಿದೆ. ಪರೀಕ್ಷೆಗಳೂ ಆನ್‌ಲೈನ್ ಮೂಲಕ ನಡೆಯಲಿದೆ.


ಶ್ರೀ ಪುತ್ತಿಗೆ ಮಠದ ಮಾರ್ಗದರ್ಶನದಲ್ಲಿ ನಡೆಯುವ ಈ ಕೋರ್ಸ್ನ ಪಠ್ಯಪುಸ್ತಕವಾಗಿ ಶ್ರೀ ಪುತ್ತಿಗೆ ಮಠದ ವತಿಯಿಂದ ಬಿಡುಗಡೆಗೊಂಡ ಗೀತಾಮೃತಸಾರ ಪುಸ್ತಕವನ್ನು ಸ್ವೀಕರಿಸಲಾಗಿದೆ. ಈ ಭಗವದ್ಗೀತಾ ಡಿಪ್ಲೊಮಾ ಕೋರ್ಸ್ ಅತ್ಯಂತ ಯಶಸ್ವಿಯಾಗಲಿ ಎಂದು ಪೂಜ್ಯ ಶ್ರೀಪಾದರು ಹಾರೈಸಿದರು.


ಕಿರಿಯ ಶ್ರೀಪಾದರಾದ ಪರಮಪೂಜ್ಯ ಶ್ರೀ ಶ್ರೀ ಸುಶ್ರೀಂದ್ರತೀರ್ಥಶ್ರೀಪಾದರು ಆಶೀರ್ವಚನ ನೀಡಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿ ಡಾ. ಎಂ.ಎಸ್ ಮೂಡಿತ್ತಾಯರು ವಿಶ್ವವಿದ್ಯಾಲಯ ಹಮ್ಮಿಕೊಂಡಿರುವ ಭಾರತೀಯ ಶಿಕ್ಷಣ ವ್ಯವಸ್ಥೆ ಮತ್ತು ಭಗವದ್ಗೀತಾ ಡಿಪ್ಲೊಮಾ ಕೋರ್ಸ್‌ಗಳ ಆವಶ್ಯಕತೆ ಹಾಗೂ ಹಿನ್ನೆಲೆಯನ್ನು ವಿವರಿಸಿದರು.


ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಖ್ಯಾತ ಪುರಾತತ್ವ ಶಾಸ್ತ್ರಜ್ಞರಾದ ಪದ್ಮಶ್ರೀ ಕೆ.ಕೆ ಮೊಹಮ್ಮದ್ ಹಾಗೂ ಟೆಂಪ್ಲೆಕ್ಸ್ ಸಿಟಿ ಖ್ಯಾತ ಬರಹಗಾರ  ಶ್ರೀ ಸುರೇಂದ್ರನಾಥ್ ಬೋಪ್ಪರಾಜು ಮತ್ತು ಹಿರಿಯ ಸಂಶೋಧಕ ವಿದ್ವಾಂಸರಾದ ಪ್ರೊ. ಶ್ರೀಪತಿ ತಂತ್ರಿ ಉಡುಪಿ ಉಪಸ್ಥಿತರಿದ್ದರು. ನಿಟ್ಟೆ ವಿಶ್ವವಿದ್ಯಾಲಯದ ಭಾರತೀಯ ಜ್ಞಾನ ವ್ಯವಸ್ಥಾ ಕೇಂದ್ರದ ನಿರ್ದೇಶಕರಾದ ಡಾ ಸುಧೀರ್ ರಾಜ್ ಅವರು ಪ್ರಾಸ್ತಾವಿಕ ಭಾಷಣ ಮಾಡಿದರು. ಶ್ರೀ ವಾದಿರಾಜ ಸಂಶೋಧನ ಪ್ರತಿಷ್ಠಾನದ ಸಂಚಾಲಕರಾದ ಶ್ರೀ ಪ್ರಸನ್ನ ಆಚಾರ್ಯರ ಸಂಘಟನೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಡಾ. ಬಿ. ಗೋಪಾಲಾಚಾರ್ಯರು ನಿರ್ವಹಿಸಿದರು.


ಭಗವದ್ಗೀತಾ ಡಿಪ್ಲೊಮಾ ಕೋರ್ಸ್ ಪ್ರವೇಶಕ್ಕಾಗಿ ನಿಟ್ಟೆ ವಿಶ್ವವಿದ್ಯಾಲಯದ IKS ಕೇಂದ್ರದ ನಿರ್ದೇಶಕರಾದ ಡಾ ಸುಧೀರ್ ರಾಜ್ ಕೆ (99459 12075) ಅವರನ್ನು ಸಂಪರ್ಕಿಸಬಹುದು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top