ನ್ಯಾಯವಾದಿ ಎಂ.ಕೆ. ವಿಜಯ ಕುಮಾರ್ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಸಂತಾಪ

Upayuktha
0


ಮಂಗಳೂರು: ಪಕ್ಷದ ಹಿರಿಯ ಮುಖಂಡ, ಖ್ಯಾತ ನ್ಯಾಯವಾದಿ, ವಾಗ್ಮಿ ಎಂ.ಕೆ. ವಿಜಯ ಕುಮಾರ್ ಅವರ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ.


ಪಕ್ಷದ ಬೆಳವಣಿಗೆಯ ಸಂದರ್ಭದಲ್ಲಿ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಅತ್ಯಂತ ಸಕ್ರಿಯವಾಗಿದ್ದುಕೊಂಡು, ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಭದ್ರ ನೆಲೆ ಇಲ್ಲದ ಕಾಲದಲ್ಲಿಯೂ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪಕ್ಷ ನಿಷ್ಠೆ ಮೆರೆದಿರುವ ಜೊತೆಗೆ ಸಹಸ್ರಾರು ನಿಷ್ಠಾವಂತ ಕಾರ್ಯಕರ್ತರಿಗೆ ಪ್ರೇರಣಾ ಶಕ್ತಿಯಾಗಿದ್ದ ಎಂ.ಕೆ. ವಿಜಯ ಕುಮಾರ್ ಅವರ ನಿಧನ ಪಕ್ಷಕ್ಕೆ ತುಂಬಲಾರದ ನಷ್ಟವೆನಿಸಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.


ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ, ಕುಟುಂಬಕ್ಕೆ ಅವರ ಆಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಕುತ್ಯಾರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top