ಉಡುಪಿ: ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಡಾ.ಶಿವರಾಮ ಕಾರಂತರ ಜನ್ಮ ದಿನಾಚರಣೆಯ ಪ್ರಯುಕ್ತ ಕಾರಂತರ ಕೃತಿಗಳ ಕುರಿತಾಗಿ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ರಾಜ್ಯದ ವಿವಿಧ ಭಾಗಗಳ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಬಹುಸಂಖ್ಯೆಯಲ್ಲಿ ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ. ಡಾ.ಶಿವರಾಮ ಕಾರಂತರ ಜನ್ಮದಿನಾಚರಣೆಯ ಕಾರ್ಯಕ್ರಮವು ಅಕ್ಟೋಬರ್ 11 ರಂದು ಉಡುಪಿಯ ಎಂ.ಜಿ.ಎಂ ಕಾಲೇಜಿನಲ್ಲಿ ನಡೆಯಲಿದ್ದು ಅಂದು ಬಹುಮಾನ ವಿತರಣೆ ನಡೆಸಲಾಗುವುದು. ಅತ್ಯುತ್ತಮ ಪ್ರಬಂಧಗಳನ್ನು ಪ್ರಕಟಿಸಲಾಗುವುದು ಎಂದು ಡಾ.ಶಿವರಾಮ ಕಾರಂತರ ಟ್ರಸ್ಟಿನ ಸದಸ್ಯ ಕಾರ್ಯದರ್ಶಿಗಳ ಪ್ರಕಟಣೆ ತಿಳಿಸಿದೆ.
ಬಹುಮಾನದ ವಿವರಗಳು :
ಪದವಿ ವಿಭಾಗ : ಪ್ರಥಮ – ಮಾನಸ, ಸರಕಾರಿ ಪ್ರಥಮ ದರ್ಜೆ ಕಾಲೇಜು, ಪುಂಜಾಲಕಟ್ಟೆ ಬಂಟ್ವಾಳ, ದ್ವಿತೀಯ : ಶರಣ್ಯ ಶೆಟ್ಟಿ , ಡಾ. ಬಿ. ಬಿ ಹೆಗ್ಡೆ ಕಾಲೇಜು ಕುಂದಾಪುರ, ತೃತೀಯ : ಅಬಿಜ್ಞಾ ಹೆಗ್ಡೆ, ಎಸ್. ಎಂ .ಎಸ್ ಕಾಲೇಜು, ಬ್ರಹ್ಮಾವರ, ಸ್ನಾತಕೋತ್ತರ ವಿಭಾಗ : ಪ್ರಥಮ- ಸುಶ್ಮಿತಾ ಶೆಟ್ಟಿ, ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ದ್ವಿತೀಯ- ಸಾಧನ, ಜಸ್ಟಿಸ್ ಕೆ.ಎಸ್. ಹೆಗ್ಡೆ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್, ತೃತೀಯ – ಕೀರ್ತನಾ ಎಸ್ ಶೆಟ್ಟಿ, ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು. ಸಾರ್ವಜನಿಕ ವಿಭಾಗ : ಪ್ರಥಮ- ತೇಜಸ್ವಿನಿ ವಿ. ಸಂಶೋಧನಾ ವಿದ್ಯಾರ್ಥಿನಿ ಮೈಸೂರು ವಿಶ್ವವಿದ್ಯಾನಿಲಯ, ದ್ವಿತೀಯ- ಮೈತ್ರಿ ಭಟ್ ವಿಟ್ಲ, ತೃತೀಯ-ಶಾಲಿನಿ ಯು.ಬಿ ಉಡುಪಿ, ಯಜ್ಞ ನಾರಾಯಣ ಉಳ್ಳೂರ ಕೋಟೇಶ್ವರ .
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


 
 
 
 
 
 
 
 
 
 
 
 

 
