ಕಾರ್ಯದೊಂದಿಗೆ ಕಲಿತು ಬೆಳೆದವರು ಕಾರಂತರು : ವಿಜಯಶಂಕರ್

Upayuktha
0



ಉಡುಪಿ : ಡಾ.ಶಿವರಾಮ ಕಾರಂತರು ಕನ್ನಡ ಸಾಹಿತ್ಯದಲ್ಲಿ ವಿಶಿಷ್ಟ ದಾರಿ. ಬುದ್ಧ ಮತ್ತು ಗಾಂಧೀಜಿಯಂತೆ ಪ್ರಯೋಗಗಳ ಮೂಲಕ ಕಲಿತು ವ್ಯಕ್ತಿತ್ವವನ್ನು ರೂಪಿಸಿಕೊಂಡವರು ಕಾರಂತರು. ಯುವ ಜನರ ವ್ಯಕ್ತಿತ್ವ ಬೆಳವಣಿಗೆಗೆ ಕಾರಂತರ ದಾರಿ ಮಾದರಿಯಾಗಿದೆ ಎಂದು ಖ್ಯಾತ ವಿಮರ್ಶಕ ಡಾ.ಎಸ್ ಆರ್ ವಿಜಯಶಂಕರ್ ಹೇಳಿದರು. 


ಅವರು ಕಾರ್ಕಳದ ಕೋಟಿ ಚೆನ್ನಯ್ಯ ಥೀಂ ಪಾರ್ಕ್ ನ ಆವರಣದಲ್ಲಿ ಕಾರ್ಕಳ ಯಕ್ಷ ರಂಗಾಯಣ ಮತ್ತು ಡಾ. ಶಿವರಾಮ ಕಾರಂತ ಟ್ರಸ್ಟಿನ ಸಹಯೋಗದಲ್ಲಿ ನಡೆದ ಕಾರಂತ ಉಪನ್ಯಾಸ ಮತ್ತು ಕಾರಂತ ರಂಗ ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಕಾರಂತರ ಒಡನಾಟದ ತಮ್ಮ ಅನುಭವವನ್ನು ವಿವರಿಸಿದರು. 


ಆಶಯ ಮಾತನಾಡಿದ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಶೆಟ್ಟಿ ಎಕ್ಕಾರು ಟ್ರಸ್ಟಿನ ಉದ್ದೇಶಗಳನ್ನು ವಿವರಿಸಿದರು. ರಂಗಾಯಣದ ನಿರ್ದೇಶಕ ವೆಂಕಟರಮಣ ಐತಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಳಿಕ ಚರ್ಚೆ ಕಾರ್ಯಕ್ರಮ ನಡೆಯಿತು. ಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಮಂಜುನಾಥ ಕೋಟ್ಯಾನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. 


ಕಾರ್ಯಕ್ರಮದಲ್ಲಿ ಸೌಮ್ಯ ನಿರೂಪಿಸಿ, ಚಂದ್ರನಾಥ್ ಬಜೆಗೋಳಿ ಸ್ವಾಗತಿಸಿ, ವಂದಿಸಿದರು. ಬಳಿಕ ನಿರ್ದಿಂಗತ ತಂಡದ  ಕಾರಂತರ ಕಾದಂಬರಿ ಆಧಾರಿತ “ಮೈಮನಗಳ ಸುಳಿಯಲ್ಲಿ” ನಾಟಕ ಪ್ರದರ್ಶನ ನಡೆಯಿತು. 


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top