ಕುವೆಂಪು-ಕಾರಂತ ಸಾಂಸ್ಕೃತಿಕ ಒಡನಾಟ ಶಿಬಿರ ಉದ್ಘಾಟನೆ

Upayuktha
0


ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಬೆಂಗಳೂರಿನ ಸಂತ ಜೋಸೆಫರ ವಾಣಿಜ್ಯ ಕಾಲೇಜಿನ ವಿದ್ಯಾರ್ಥಿಗಳ ಅಧ್ಯಯನ ಪ್ರವಾಸದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸುವರ್ಣ ಸಾಂಸ್ಕೃತಿಕ ಸಮುಚ್ಛಯ ಸಭಾಂಗಣದಲ್ಲಿ ಮಂಗಳವಾರ ನಡೆದ ಕುವೆಂಪು- ಕಾರಂತ ಸಾಂಸ್ಕೃತಿಕ ಒಡನಾಟ ಶಿಬಿರವನ್ನು ರಥಬೀದಿ ಗೆಳೆಯರು ಅಧ್ಯಕ್ಷ ನಾಗೇಶ್ ಕುಮಾರ್ ಉದ್ಯಾವರ ಉದ್ಘಾಟಿಸಿದರು.


ಕುವೆಂಪು ಮತ್ತು ಕಾರಂತರನ್ನು ಅರ್ಥಮಾಡಿಕೊಂಡು ಯುವಕರು ಹೊಸ ರೀತಿ ಚಿಂತನೆಗೆ ತಮ್ಮನ್ನು ಒಡ್ಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು. ಭಾರತೀಯ ಸ್ಕೌಟ್ಸ್ ಮತ್ತು ಗೈಡ್ಸ್‍ನ  ಜಿಲ್ಲಾ ಆಯುಕ್ತ ಜನಾರ್ಧನ ಕೊಡವೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ. ಗಣನಾಥ ಶೆಟ್ಟಿ ಎಕ್ಕಾರು ಮಾತನಾಡಿ, ಉಡುಪಿಗೆ ಬಂದು ಕಾರಂತರ ಬಗ್ಗೆ ಅರಿತುಕೊಳ್ಳುವುದು ಕುಪ್ಪಳ್ಳಿಯಲ್ಲಿ ಕುವೆಂಪು ಅವರನ್ನು ಅರಿತುಕೊಳ್ಳುವ ವಿದ್ಯಾರ್ಥಿಗಳ ಅಧ್ಯಯನ ಪ್ರಯತ್ನ ವಿಶಿಷ್ಟವಾಗಿದೆ ಎಂದು ಶ್ಲಾಘಿಸಿದರು. ಕರಾವಳಿಯ ಸಂಸ್ಕೃತಿಯ ವೈಶಿಷ್ಟತೆಯ ಬಗ್ಗೆ ವಿವರಗಳನ್ನು ನೀಡಿದರು. ಪ್ರವಾಸದ ಸಂಯೋಜಕ ಡಾ.ಲವಕುಮಾರ್ ಪ್ರವಾಸ ಮತ್ತು ಶಿಬಿರದ ಉದ್ದೇಶವನ್ನು ವಿವರಿಸಿದರು.


ಕಾರ್ಯಕ್ರಮದಲ್ಲಿ ಟ್ರಸ್ಟಿನ ಸದಸ್ಯ ಸತೀಶ್ ಕೊಡವೂರು, ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಡಾ. ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿ ಪೂರ್ಣಿಮಾ ಸ್ವಾಗತಿಸಿದರು. ಕಾಲೇಜಿನ ವಿದ್ಯಾರ್ಥಿನಿ ರಶಿತಾ ನಿರೂಪಿಸಿ,  ಟ್ರಸ್ಟಿನ ಸದಸ್ಯ ಸಂತೋಷ್ ನಾಯಕ್ ಪಟ್ಲ ವಂದಿಸಿದರು. 


ಶಿಬಿರದ ಅಂಗವಾಗಿ ಉಡುಪಿ ಯಕ್ಷಗಾನ ಕೇಂದ್ರ, ಕಾರಂತ ಥೀಂ ಪಾರ್ಕ್ , ಕೋಟಿ ಚೆನ್ನಯ ಥೀಂ ಪಾರ್ಕ್, ಡಾ.ಎ.ಬಿ ಬಾಳಿಗ ಆಸ್ಪತ್ರೆಗಳಿಗೆ ಭೇಟಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಕುಪ್ಪಳಿಯಲ್ಲಿ ಕುವೆಂಪು ಅಧ್ಯಯನ ಯೋಜನೆಯನ್ನು ರೂಪಿಸಲಾಗಿದೆ. 



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top