ವಿಕಸನ: ಅಭಿವಿನ್ಯಾಸ ಕಾರ್ಯಕ್ರಮ

Upayuktha
0



ಉಡುಪಿ: ಜೀವನದಲ್ಲಿ ನಿರ್ದಿಷ್ಟ ಗುರಿ, ಸತತ  ಪರಿಶ್ರಮ, ನಿರಂತರ ಕಲಿಕೆ, ಕೌಶಲ್ಯ  ಹಾಗೂ ತಾಳ್ಮೆ ಇದ್ದಲ್ಲಿ ಮಾತ್ರ ಯಶಸ್ಸು ಸಾಧ್ಯ ಎಂದು ಜಸ್ಟೀಸ್ ಕೆ. ಎಸ್. ಹೆಗ್ಡೆ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್, ನಿಟ್ಟೆ, ಇಲ್ಲಿಯ ಪ್ರಾಧ್ಯಾಪಕ ಹಾಗೂ ಕಾರ್ಪೊರೇಟ್ ತರಬೇತುದಾರ ಡಾ. ಸುಧೀರ್ ರಾಜ್ ಕೆ. ಅಭಿಪ್ರಾಯಪಟ್ಟರು.  ಅವರು  ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ, ತೆoಕನಿಡಿಯೂರು, ಉಡುಪಿ, ಇಲ್ಲಿ ಐ.ಕ್ಯೂ.ಎ.ಸಿ. ಹಾಗೂ ಎಲ್ಲಾ ಸ್ನಾತಕೋತ್ತರ ವಿಭಾಗಗಳ ಸಹಯೋಗದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ “ವಿಕಸನ: ಅಭಿವಿನ್ಯಾಸ ಕಾರ್ಯಕ್ರಮ” ದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. 


ಕಾರ್ಯಕ್ರಮದ ಉದ್ಘಾಟಕರಾಗಿ ಮಾತನಾಡಿದ ಡಾ. ದೇವಿದಾಸ್ ನಾಯಕ್, ಪ್ರಾಂಶುಪಾಲರು, ಎಂ. ಜಿ. ಎಂ. ಸಂಧ್ಯಾ ಕಾಲೇಜು, ಉಡುಪಿ, ಇವರು ಇಂದಿನ ಡಿಜಿಟಲ್ ಯುಗದಲ್ಲಿ ಬದಲಾವಣೆಗೆ ತೆರೆದುಕೊಳ್ಳುವಿಕೆ ಮತ್ತು ಸ್ವಂತ ಕಲಿಕೆ ನಮ್ಮನ್ನು ಬಹು ಎತ್ತರಕ್ಕೆ ಕೊಂಡೊಯ್ಯಬಲ್ಲದು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ  ಪ್ರಾಂಶುಪಾಲ ಪ್ರೊ. ನಿತ್ಯಾನಂದ ವಿ. ಗಾಂವಕರ ನಿರಂತರ ಕಲಿಕೆ ಹಾಗೂ ಕೌಶಲ್ಯ ಅಭಿವೃದ್ದಿಗಾಗಿ ಕಾಲೇಜು ಹಲವಾರು ಕಾರ್ಯಕ್ರಮಗಳನ್ನು   ಆಯೋಜಿಸುತ್ತಿದ್ದು ವಿದ್ಯಾರ್ಥಿಗಳು ಅದರ ಪ್ರಯೋಜನ ಪಡೆಯಬೇಕು  ಎಂದರು.


ಆಂಗ್ಲಭಾಷಾ ವಿಭಾಗ ಮುಖ್ಯಸ್ಥ ಹಾಗೂ ಶೈಕ್ಷಣಿಕ  ಸಲಹೆಗಾರ  ಡಾ. ಶ್ರೀಧರ್ ಭಟ್  ಇವರು ಕಾರ್ಯಕ್ರಮ ನಿರ್ವಹಿಸಿದರು.  ಐ.ಕ್ಯೂ.ಎ.ಸಿ. ಸಂಚಾಲಕ ಡಾ. ವಿಷ್ಣುಮೂರ್ತಿ ಪ್ರಭು, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸಂದೇಶ್ ಎಂ. ವಿ., ಎಲ್ಲಾ ಸ್ನಾತಕೋತ್ತರ ವಿಭಾಗಗಳ ಮುಖ್ಯಸ್ಥರು, ಅಧ್ಯಾಪಕರು ಹಾಗೂ ವಿವಿಧ   ಸ್ನಾತಕೋತ್ತರ ವಿಭಾಗಗಳ ಸುಮಾರು 200ರಷ್ಟು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.




Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top