ಉಜಿರೆ: ಸಂಚಾರ ನಿಯಮ ಕುರಿತು ಮಾಹಿತಿ ಕಾರ್ಯಾಗಾರ

Upayuktha
0


ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ದಿನದ ಪ್ರಯುಕ್ತ ಉಜಿರೆ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಸಾಂಸ್ಕೃತಿಕ ಸಮಿತಿ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದೊಂದಿಗೆ ಸಂಚಾರಿ ನಿಯಮ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು.


ಬೆಳ್ತಂಗಡಿ ಸಂಚಾರಿ ಠಾಣೆಯ ಪಿ ಎಸ್ ಐ ನಿಂಗಪ್ಪ ಜಕ್ಕಣ್ಣನವರ್ ರವರು ವಾಹನ ಚಲಾಯಿಸುವಾಗ ಅನುಸರಿಸಬೇಕಾದ ನಿಯಮಗಳು, ಬೈಕ್ ಚಲಾಯಿಸಲು ಸವಾರನಿಗೆ ಹೆಲ್ಮೆಟ್ ಕಡ್ಡಾಯ ಕಾನೂನು, ವಾಹನ ಚಲಾವಣೆಗೆ ಇರಬೇಕಾದ ಅರ್ಹತೆ  ಹಾಗೂ ನಿಯಮ ಉಲ್ಲಂಘಸಿದರೆ ವಿಧಿಸುವ ದಂಡ, ಪೋಕ್ಸೋ ಕಾಯಿದೆ, ಮಾದಕ ವಸ್ತುಗಳ ದುಷ್ಪಪರಿಣಾಮ, ಜಾಗೃತಿ, ಕಾನೂನಿಗೆ ಭಂಗ ತರುವ ಸಂಘಟನೆಗಳಲ್ಲಿ ಭಾಗವಹಿಸುವುದು ಮುಂತಾದ ವಿಷಯಗಳ ಕುರಿತು ಮಾಹಿತಿ ನೀಡಿದರು. ಕಾಲೇಜಿನ ಆಂಗ್ಲ ಭಾಷಾವಿಭಾಗದ ಮುಖ್ಯಸ್ಥೆ ಸೀಮಾ ರವರು ಅಧ್ಯಕ್ಷೆತೆ ವಹಿಸಿದ್ದರು.


ವೇದಿಕೆಯಲ್ಲಿ ಸಾಂಸ್ಕೃತಿಕ ಸಮಿತಿಯ ಸಂಯೋಜಕರಾದ ನಾಗರಾಜ್ ಭಂಡಾರಿ, ಎನ್ ಎಸ್ ಎಸ್ ಯೋಜನಾಧಿಕಾರಿ ವಿಶ್ವನಾಥ್ ಎಸ್, ಸಹ ಯೋಜನಾಧಿಕಾರಿ ಶೋಭಾ ಪಿ, ಹಿಂದಿ ವಿಭಾಗದ ಉಪನ್ಯಾಸಕಿ ಫ್ಲೇವಿಯಾ ಪೌಲ್, ಜೀವ ಶಾಸ್ತ್ರ ವಿಭಾಗದ ಉಪನ್ಯಾಸಕಿ ಕವನಶ್ರೀ ಜೈನ್, ಸ್ವಯಂ ಸೇವಕಿ ರಾಶಿಕ ನಿರೂಪಿಸಿದ ಕಾರ್ಯಕ್ರಮದಲ್ಲಿ ಪ್ರಣಮ್ಯ ಜಿ ಕೆ ಸ್ವಾಗತಿಸಿ ಪಂಚಮಿ ವಂದಿಸಿದರು. ಮೇಧಾ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top