ಉಜಿರೆ: ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಜಿರೆಯ ಕೇಂದ್ರ ಕಛೇರಿಗೆ ಕರ್ಣಾಟಕ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಘವೇಂದ್ರ ಶ್ರೀನಿವಾಸ ಭಟ್ ಭೇಟಿ ನೀಡಿದರು.
ಇದೇ ಸಂದರ್ಭದಲ್ಲಿ ಕರ್ಣಾಟಕ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಘವೇಂದ್ರ ಶ್ರೀನಿವಾಸ ಭಟ್ ರವರಿಗೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಅಭಿನಂದಿಸಿದರು.
ಈ ವೇಳೆ ಕರ್ಣಾಟಕ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಚೇರಿಯ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ವಾದಿರಾಜ ಭಟ್, ಉಡುಪಿ ರಥಬೀದಿ ಶಾಖೆಯ ಹಿರಿಯ ಪ್ರಬಂಧಕ ಪ್ರಶಾಂತ್ ಎಂ. ರಾವ್ ಎಸ್.ಡಿ.ಎಂ ಎಜುಕೇಷನಲ್ ಸೊಸೈಟಿ ಹಣಕಾಸು ಅಧಿಕಾರಿ ಅರವಿಂದ್ ಭಗವತ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ರಾಘವೇಂದ್ರ ಶ್ರೀನಿವಾಸ ಭಟ್ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯ ಚಟುವಟಿಕೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


