ಉಜಿರೆಯ ಎಸ್.ಡಿ.ಎಂ ಕಾಲೇಜು, ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ, ದೈಹಿಕ ಶಿಕ್ಷಣ ವಿಭಾಗ ಜಂಟಿಯಾಗಿ ಡಿ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಆಯೋಜಿಸಿರುವ 2025-26 ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಅಂತರಕಾಲೇಜು ಮಟ್ಟದ ಮೂರು ದಿನಗಳ ಪುರುಷರ ವಾಲಿಬಾಲ್ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕ್ರೀಡೆಯು ದೇಹ ಮತ್ತು ಮನಸ್ಸಿನ ಸಮತೋಲನವನ್ನು ಕಾಪಾಡಿ ವ್ಯಕ್ತಿಯ ಸಂಪೂರ್ಣ ವ್ಯಕ್ತಿತ್ವ ಅಭಿವೃದ್ಧಿಗೆ ನೆರವಾಗುತ್ತದೆ. ಪ್ರತಿಯೊಬ್ಬರೂ ಜೀವನದಲ್ಲಿ ಕ್ರೀಡೆಗೆ ಸಮಯ ನೀಡಬೇಕು. ಜನರು ದಿನನಿತ್ಯದ ಚಟುವಟಿಕೆಯಲ್ಲಿ ಆರೋಗ್ಯದ ಕಾಳಜಿ ಬಗ್ಗೆ ಮರೆಯುತ್ತಿದ್ದಾರೆ. ವಿದ್ಯಾರ್ಥಿಗಳು ಶೈಕ್ಷಣಿಕ ತರಬೇತಿ ಜೊತೆಗೆ ಪಠ್ಯೇತರ ತರಬೇತಿಯಲ್ಲಿಯೂ ತೊಡಗಿಸಿಕೊಂಡರೆ ಯಶಸ್ಸು ಸಿಗಲು ಸಾಧ್ಯ. ಕ್ರೀಡೆಯನ್ನು ಸ್ಪರ್ಧೆಗಾಗಿ ಅಲ್ಲದೆ ಜೀವನದ ಅವಿಭಾಜ್ಯ ಅಂಗವಾಗಿ ತೊಡಗಿಸಿಕೊಳ್ಳಬೇಕು ಎಂದರು.
ವಾಲಿಬಾಲ್ ಆಕರ್ಷಕವಾದ ಆಟವಾಗಿದ್ದು ಇದರಲ್ಲಿ ಕ್ರೀಡಾ ಸ್ಪೂರ್ತಿಯಿಂದ ಭಾಗವಹಿಸಿ ಅತ್ಯುತ್ತಮ ಪ್ರದರ್ಶನವನ್ನ ವಿದ್ಯಾರ್ಥಿಗಳು ನೀಡಬೇಕು. ರತ್ನವರ್ಮ ಕ್ರೀಡಾಂಗಣ ಕಳೆದ ದಶಕಗಳಿಂದ ರಾಜ್ಯ, ಮತ್ತು ಅಂತಾರಾಷ್ಟ್ರೀಯ ಕ್ರೀಡಾಪಟುಗಳನ್ನು ಕೊಟ್ಟಿದೆ ಎಂದು ಹೇಳಿದರು.
ಕಾರ್ಯಕ್ರಮದ ಮುಖ್ಯ ಅತಿಥಿ, ಹಳೆಯಂಗಡಿಯ ಸರ್ಕಾರಿ ಪ್ರಥಮದರ್ಜೆ ಮಹಾವಿದ್ಯಾಲಯದ ನಿವೃತ್ತದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಜಾನ್ ಪಿಂಟೋ ಮಾತನಾಡಿದರು. ಎಲ್ಲರಿಗೂ ರಾಷ್ಟೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗದಿದ್ದರೂ ದೈಹಿಕ ಸುಸ್ಥಿರತೆ ಕಾಯ್ದುಕೊಳ್ಳುವುದಕ್ಕಾದರೂ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಪ್ರತಿಯೊಬ್ಬರು ಕ್ರೀಡೆಯ ಪ್ರಯೋಜನವನ್ನು ಪಡೆದುಕೊಳ್ಳಬೇಕು . ಮೈದಾನವು ಜನರಿಂದ ತುಂಬಿದರೆ ಆಸ್ಪತ್ರೆಗಳು ಖಾಲಿಯಾಗುತ್ತವೆ. ಆದರೆ ಮೈದಾನಗಳು ಖಾಲಿಯಾಗಿದ್ದರೆ ಆಸ್ಪತ್ರೆಗಳು ತುಂಬಿ ಹೋಗುತ್ತವೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಿಶ್ವನಾಥ ಪಿ ಅವರು ಮಾತನಾಡಿದರು. ಕ್ರೀಡೆಗಳು ಜೀವನದಲ್ಲಿ ಶಿಸ್ತು, ಸಮಯ ನಿರ್ವಹಣೆಯ ಗುಣಗಳನ್ನು ಬೆಳೆಸಲು ಮಹತ್ತರ ಪಾತ್ರವಹಿಸುತ್ತವೆ ಎಂದರು. ಕಾಲೇಜಿನ 6 ವಿದ್ಯಾರ್ಥಿಗಳು ದೇಶದ ಪ್ರಖ್ಯಾತ ಏಕಲವ್ಯ ಪ್ರಶಸ್ತಿಗೆ ಭಾಜನರಾಗಿದ್ದು, 4 ವಿದ್ಯಾರ್ಥಿಗಳು ಕಾಮನ್‌ವೆಲ್ತ್ ಕ್ರೀಡೆಗಳಲ್ಲಿ ಹಾಗೂ ಪ್ರೊಕಬಡ್ಡಿ ಲೀಗ್ ನಲ್ಲಿತಮ್ಮ ಪ್ರತಿಭೆಯನ್ನು ತೋರಿದ್ದಾರೆ.
ಕಾಲೇಜಿನಲ್ಲಿರುವ ವ್ಯವಸ್ಥೆ ಹಾಗೂ ವಿದ್ಯಾರ್ಥಿಗಳ ಪರಿಶ್ರಮದಿಂದ ಇದು ಸಾಧ್ಯವಾಗಿದೆ. ಕ್ರೀಡೆಗಳ ಮೂಲಕ ನೈಜಜೀವನದ ಅನುಭವ ಹಾಗೂ ನಾಯಕತ್ವದ ಕೌಶಲ್ಯಗಳು ಬೆಳೆಯುತ್ತವೆ. ವಿದ್ಯಾಭ್ಯಾಸಕ್ಕೆ ಪೂರಕವಾಗಿ ಕ್ರೀಡೆಗಳಲ್ಲಿಯೂ ಭಾಗವಹಿಸುವ ಕ್ರೀಡಾಪಟುಗಳು ವಿವಿಧ ವಿದ್ಯಾರ್ಥಿಗಳಿಗೂ ಕ್ರೀಡೆಯಲ್ಲಿ ಪಾಲ್ಗೊಳ್ಳಲು ಪ್ರೇರಣೆ ನೀಡಬೇಕು ಎಂದರು.
ದೈಹಿಕ ಶಿಕ್ಷಣ ನಿರ್ದೇಶಕರಾದ ರಮೇಶ್ ಹೆಚ್, ದೈಹಿಕ ಶಿಕ್ಷಣ ನಿರ್ದೇಶಕಿ ಶಾರದಾ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಡಾ.ಸುವೀರ್ ಜೈನ್ ನಿರೂಪಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ