ಉಜಿರೆ ಎಸ್‌ ಡಿ ಎಂ ಕಾಲೇಜು: ‘ಮಾನಸಿಕ ಆರೋಗ್ಯ’ ಕುರಿತ ಪೋಸ್ಟರ್‌ ಪ್ರದರ್ಶನಕ್ಕೆ ಚಾಲನೆ

Upayuktha
0

 


ಉಜಿರೆ: ವಿಶ್ವ ಮಾನಸಿಕ ಆರೋಗ್ಯ ದಿನದ ಅಂಗವಾಗಿ ಉಜಿರೆ ಎಸ್‌ ಡಿ ಎಂ ಕಾಲೇಜಿನ ಮನಃಶಾಸ್ತ್ರ ವಿಭಾಗದಲ್ಲಿ ಆಯೋಜಿಸಿದ ‘ಮಾನಸಿಕ ಆರೋಗ್ಯ’ ಕುರಿತ ಒಂದು ವಾರದ ಪೋಸ್ಟರ್‌ ಪ್ರದರ್ಶನಕ್ಕೆ ಸೋಮವಾರ ಚಾಲನೆ ದೊರೆಯಿತು.


ಕಾಲೇಜಿನ ಕಲಾ ನಿಕಾಯದ ಡೀನ್, ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥ ಡಾ. ಭಾಸ್ಕರ ಹೆಗಡೆ ಉದ್ಘಾಟಿಸಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮಾನಸಿಕ ಆರೋಗ್ಯ ಬಹಳ ಮುಖ್ಯವಾಗಿದ್ದು, ನೆಮ್ಮದಿಯ ಮೊರೆ ಹೋಗುವವರ ಸಂಖ್ಯೆ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಮನಃಶಾಸ್ತ್ರ ವಿಭಾಗ ಮಹತ್ತರ ಜವಾಬ್ದಾರಿ ಹೊಂದಿದೆ ಎಂದರು.


ಮಾನಸಿಕ ಆರೋಗ್ಯ ಕುರಿತ ಅರಿವು, ಕಾಳಜಿ ಪಸರಿಸುವಲ್ಲಿ ಮನಃಶಾಸ್ತ್ರ ವಿಭಾಗಕ್ಕೆ ಹೆಚ್ಚು ಅವಕಾಶಗಳಿವೆ. ಮನಃಶಾಸ್ತ್ರ ವಿದ್ಯಾರ್ಥಿಗಳು ಜಾಗೃತಿ ಮೂಡಿಸಬೇಕು. ಜಾಗೃತಿ ಪೋಸ್ಟರ್ ಗಳು ಗೋಡೆಗೆ ಸೀಮಿತವಾಗದೆ ಎಲ್ಲರಿಗೂ ತಲುಪುವಂತಾಗಬೇಕು. ಇನ್ನಷ್ಟು ಜಾಗೃತಿ ಕಾರ್ಯಕ್ರಮಗಳು ವಿಭಾಗದಿಂದ ಮೂಡಿಬರಲಿ ಎಂದು ಅವರು ಆಶಿಸಿದರು.


ವಿಜ್ಞಾನ ನಿಕಾಯದ ಡೀನ್‌, ಸಂಖ್ಯಾಶಾಸ್ತ್ರ ವಿಭಾಗ ಮುಖ್ಯಸ್ಥೆ ಡಾ. ಸವಿತಾ ಕುಮಾರಿ, ಮನಃಶಾಸ್ತ್ರ ವಿಭಾಗ ಮುಖ್ಯಸ್ಥೆ ಡಾ. ವಂದನಾ ಜೈನ್‌, ಉಪನ್ಯಾಸಕರಾದ ಡಾ. ಸುಧೀರ್‌ ಕೆ.ವಿ., ಪದ್ಮಶ್ರೀ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


 ಕನ್ನಿಕಾ ಎಸ್‌. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕೀರ್ತನಾ ವಂದಿಸಿದರು.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top