
ಉಜಿರೆ: ಕಾರ್ಕಳದ ಹಿರಿಯ ವಕೀಲ ಎಂ.ಕೆ. ವಿಜಯಕುಮಾರ್ ನಿಧನಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆಯಲ್ಲಿ ಹೆಗ್ಗಡೆಯವರು, ಜೈನಧರ್ಮದ ಬಗ್ಗೆ ಆಳವಾದ ಅಧ್ಯಯನ ಮಾಡಿದ ಅವರು ಉತ್ತಮ ವಾಗ್ಮಿಯಾಗಿ ಚಿರಪರಿಚಿತರಾಗಿದ್ದರು. ರಾಜಕೀಯ ರಂಗ, ಕಾನೂನು ಸೇವೆ, ಶಿಕ್ಷಣ ಹಾಗೂ ಸಮಾಜ ಸೇವೆಯಲ್ಲಿಯೂ ಉತ್ತಮ ಸೇವೆ-ಸಾಧನೆ ಮಾಡಿದ್ದರು ಎಂದು ನೆನಪಿಸಿಕೊಂಡಿದ್ದಾರೆ.
ಕಾರ್ಕಳದಲ್ಲಿ ನಡೆದ ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕ ಸಂದರ್ಭದಲ್ಲಿ ಸಮಿತಿಯ ಕಾರ್ಯದರ್ಶಿ ಉತ್ತಮ ಸೇವೆ ಮಾಡಿದ್ದಾರೆ. ಧರ್ಮಸ್ಥಳದ ಭಕ್ತರೂ, ಅಭಿಮಾನಿಯೂ ಆಗಿದ್ದ ಅವರು ಕ್ಷೇತ್ರದ ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯ ಸಹಕಾರ ನೀಡುತ್ತಿದ್ದರು. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ. ಅವರ ಅಗಲುವಿಕೆಯಿಂದ ಕುಟುಂಬ-ವರ್ಗದವರಿಗೆ ಉಂಟಾದ ದುಃಖವನ್ನು ಶಕ್ತಿ ತಾಳ್ಮೆಯನ್ನಿತ್ತು ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಹಾಗೂ ಶ್ರೀ ಮಂಜುನಾಥ ಸ್ವಾಮಿ ಹರಸಲಿ ಎಂದು ತಿಳಿಸಿದ್ದಾರೆ..
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

