ಚೇತನಾ ಬಾಲವಿಕಾಸ ಕೇಂದ್ರದಲ್ಲಿ ಆಯುಧ ಪೂಜೆ

Upayuktha
0


ಮಂಗಳೂರು: ಸೇವಾಭಾರತಿ(ರಿ) ಮಂಗಳೂರು ಇದರ ಅಂಗಸಂಸ್ಥೆಯಾದ ವಿ.ಟಿ. ರಸ್ತೆಯಲ್ಲಿರುವ ಚೇತನಾ ಬಾಲ ವಿಕಾಸ ಕೇಂದ್ರ ವಿಶೇಷ ಮಕ್ಕಳ ಶಾಲೆಯಲ್ಲಿ ಆಯುಧ ಪೂಜೆ ಹಾಗೂ ಶಾರದಾ ಮಾತೆಯ ಪೂಜೆಯು ಬಹಳ ವಿಜೃಂಭಣೆಯಿಂದ ಜರಗಿತು.


ಶಾಲಾ ಶಿಕ್ಷಕಿಯರಿಂದ ಭಜನಾ ಕಾರ್ಯಕ್ರಮಗಳು ನಡೆದುವು. ತದನಂತರ ವೈದಿಕರ ನೇತೃತ್ವದಲ್ಲಿ ಎಲ್ಲಾ ವಾಹನಗಳಿಗೂ, ಉಪಕರಣಗಳಿಗೂ ಪೂಜಾ ವಿಧಿವಿಧಾನವು ಜರಗಿದುವು. ನೆರೆದಿದ್ದ ಎಲ್ಲರಿಗೂ ಪ್ರಸಾದ ಮತ್ತು ಸಿಹಿತಿಂಡಿ ಹಂಚಲಾಯಿತು.


ಸಮಾರಂಭದಲ್ಲಿ ಸೇವಾಭಾರತಿ ಸಂಸ್ಥೆಯ ಗೌರವ ಕಾರ್ಯದರ್ಶಿ ಹೆಚ್.ನಾಗರಾಜ ಭಟ್, ಖಜಾಂಚಿ ವಿನೋದ್ ಶೆಣೈ, ಮುಖ್ಯ ಕಾರ್ಯನಿರ್ವಾಹಣಾಧಿ ಕಾರಿ ಪೃಥ್ವೀಪಾಲ್, ಚೇತನಾ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸುಪ್ರೀತಾ, ಸಂಸ್ಥೆಯ ವಿಶ್ವಸ್ಥರು, ಇತರ ಶಿಕ್ಷಕ ಶಿಕ್ಷಕೇತರ ಸಿಬ್ಬಂದಿ, ಚೇತನಾ ಶಾಲಾ ಸಿಬ್ಬಂದಿ, ಸ್ವಯಂಸೇವಕರು, ಪೋಷಕರು, ಮಕ್ಕಳು ಹಾಗೂ ಹಿತೈಷಿಗಳು ಪಾಲ್ಗೊಂಡರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top