ಬಿ.ವೈ. ವಿಜಯೇಂದ್ರ ದಂಪತಿಗಳು ಭಾಗಿ
ಸಾಗರ: ಭಾವ ಇಲ್ಲದ ಅರ್ಚನೆಗೆ ಯಾವುದೇ ಫಲ ಇಲ್ಲ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು.
ಸಾಗರ ಅಗ್ರಹಾರದಲ್ಲಿರುವ ಶ್ರೀ ರಾಘವೇಶ್ವರ ಭವನದ ಶ್ರೀಮನ್ನಗರ ವೇದಿಕೆಯಲ್ಲಿ ಏರ್ಪಡಿಸಿರುವ ನವರಾತ್ರ ನಮಸ್ಯಾದ 10 ನೇ ದಿನದ ಲಲಿತೋಪಾಖ್ಯಾನ ಪ್ರವಚನದಲ್ಲಿ ಅವರು ನುಡಿದರು.
ಪೂಜೆಯಲ್ಲಿ ದೇವರಿಗೆ ಎಷ್ಟು ವಸ್ತು ಸಮರ್ಪಿಸುತ್ತಿದ್ದೇವೆ ಎನ್ನುವುದಕ್ಕಿಂತ ಭಕ್ತಿಯಲ್ಲಿ ಭಾವಿಸಿ ಪೂಜೆ ಮಾಡುತ್ತಿದ್ದೇವೆಯೇ? ಎನ್ನುವುದು ಅತೀ ಮುಖ್ಯ, ಯಾರ ಕುರಿತು ಪೂಜಿಸುತ್ತೇವೋ ಆ ಕುರುಣಾಮಯಿಯ ಕುರಿತು ನಮ್ಮ ಚಿತ್ತಭಿತ್ತಿಯಲ್ಲಿ ಭಾವನೆಯೇ ಇಲ್ಲದಿದ್ದರೆ ಆ ಪೂಜೆ ಪರಿಪೂರ್ಣವಲ್ಲ ಎಂದರು. ದೇವಿಯ ಪ್ರತಿ ಸ್ತೋತ್ರ ಹೇಳುವಾಗ ಸೃಷ್ಟಿಯ ನೆಮ್ಮದಿಗಾಗಿ ಆಕೆ ಮಾಡಿದ ಪ್ರತಿ ಕಾರ್ಯವೂ ನಮ್ಮ ಮನದಲ್ಲಿದ್ದರೆ ಅದನ್ನು ಸ್ಮರಿಸಿ ಧ್ಯಾನಿಸಿದರೆ ಮಾತ್ರ ಅನುಗ್ರಹ ದೊರೆಯಲಿದೆ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜೇಂದ್ರ ಪತ್ನಿ ಪ್ರೇಮಾರೊಟ್ಟಿಗೆ ಆಗಮಿಸಿ ಲಲಿತಾದೇವಿ ಪೂಜೆಯಲ್ಲಿ ಪಾಲ್ಗೊಂಡರು ಹಾಗೂ ಉಡಿ ಸಮರ್ಪಣೆಗೈದು ನಂತರ ಶ್ರೀಗಳವರಿಂದ ಆಶೀರ್ವಾದ ಪಡೆದರು.
ಇದಕ್ಕೂ ಮುನ್ನ ಬೆಳಗ್ಗೆ ಶುಂಭಹಾ ಉಪಾಸನೆ, ಜಾತವೇದಸೇ ಮಂತ್ರ ಹವನ, ಚಂಡಿಕಾ ಹವನ, ಶ್ರೀಪೂಜೆ, ಕುಂಕುಮಾರ್ಚನೆ, ಉಡಿ ಹಾಗೂ ಸ್ತೋತ್ರ ಸಮರ್ಪಣೆ, ಸುವರ್ಣ ಪಾದುಕಾ ಪೂಜೆ, ಭಜನೆ, ಲಲಿತಾ ಅಷ್ಟೋತ್ತರ ನಡೆಯಿತು. ಸಂಜೆ ದುರ್ಗಾದೀಪ ನಮಸ್ಕಾರ, ರಾಜರಾಜೇಶ್ವರಿ ಪೂಜೆ ಹಾಗೂ ಚಂಡಿಕಾ ಪಾರಾಯಣ ನೆರವೇರಿತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

