ಕುಂದಾಪುರ: ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ ಮತ್ತು ರಾಜೇಶ್ವರಿ ನ್ಯಾಷನಲ್ ಸ್ಕೂಲ್ ಸಾಣೂರು, ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ನಡೆದ ಮೈಸೂರು ವಿಭಾಗ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಲಾಸ್ಯ ಮಧ್ಯಸ್ಥ ಪ್ರಥಮ ಸ್ಥಾನ ಗಳಿಸಿ, ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
17ರ ವಯೋಮಾನದ ಬಾಲಕಿಯರ ವಿಭಾಗದ ಸಾಂಪ್ರದಾಯಿಕ (ಟ್ರಡೀಷನಲ್) ಯೋಗಾಸನ ಸ್ಪರ್ಧೆಯಲ್ಲಿ ವಿಜೇತಳಾಗಿರುವ ವಿದ್ಯಾರ್ಥಿನಿಯು ಅರುಣ ಮಧ್ಯಸ್ಥ ಮತ್ತು ಲತಾ ಮಧ್ಯಸ್ಥ ದಂಪತಿಯ ಪುತ್ರಿ.
ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಪ್ರದೀಪ್. ಕೆ ವಿಜೇತ ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಕುಮಾರ್ ವಿದ್ಯಾರ್ಥಿನಿಗೆ ಮಾರ್ಗದರ್ಶನ ನೀಡಿದ್ದರು. ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಬೋಧಕ ಬೋಧಕೇತರ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ