ಉಜಿರೆ: ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ನಡೆಸಲ್ಪಡುವ ಉಜಿರೆಯ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಕಾಲೇಜು ಮತ್ತು ಆಸ್ಪತ್ರೆಗಳ ಆಶ್ರಯದಲ್ಲಿ ಎಂಟನೆ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆಯ ಉದ್ಘಾಟನಾ ಸಮಾರಂಭ ನಾಳೆ ಮಂಗಳವಾರ ಅಪರಾಹ್ನ 3 ಗಂಟೆಗೆ ಬೆಂಗಳೂರಿನಲ್ಲಿ ವಿಧಾನಸೌಧದ ಬಾಂಕ್ವೆಟ್ ಸಭಾಭವನದಲ್ಲಿ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಸಮಾರಂಭವನ್ನು ಉದ್ಘಾಟಿಸುವರು. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು.
ವಿಧಾನಸಭೆಯ ಸಭಾಪತಿ ಯು.ಟಿ. ಖಾದರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯ ಕೆ. ಶಿವಕುಮಾರ್ ಮತ್ತು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.




