ತೆಂಕನಿಡಿಯೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿನ ಅಭ್ಯುದಯ ಸಮಾಜ ಕಾರ್ಯ ವೇದಿಕೆ ಆಯೋಜನೆಯಲ್ಲಿ ಅಭ್ಯುದಯ – 2025 (Addressing the hidden battle) ಎಂಬ ಥೀಮ್ ನೊಂದಿಗೆ ಅಂತರ್-ಕಾಲೇಜು ಸಾಂಸ್ಕೃತಿಕ ಸ್ಪರ್ಧೆಗಳನ್ನು ಯಶಸ್ವಿಯಾಗಿ ನಡೆಸಲಾಯಿತು.
ಅಭ್ಯುದಯ-2025 ಸಮಾಜಕಾರ್ಯ ಫೆಸ್ಟ್‌ನ್ನು ಉದ್ಘಾಟಿಸಿದ ಉಡುಪಿ-ಚಿಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ ಆಗಮಿಸಿ ವಿದ್ಯಾರ್ಥಿ ದೆಸೆಯಲ್ಲಿ ಇಂತಹ ಕಾರ್ಯಕ್ರಮಗಳು ನಾಯಕತ್ವ, ಸಂಘಟನಾ ಕೌಶಲ್ಯಗಳನ್ನು ವೃದ್ಧಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಸಮಾಜಕಾರ್ಯ ತತ್ವಗಳ ಅರಿವನ್ನು ಯುವಜನಾಂಗಕ್ಕೆ ತಿಳಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಿದ ಸರಕಾರಿ ಕಾಲೇಜಿನ ಸಮಾಜಕಾರ್ಯ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾಧ ನಿತ್ಯಾನಂದ ವಿ. ಗಾಂವಕರ ವಹಿಸಿಕೊಂಡಿದ್ದು, ವೇದಿಕೆಯಲ್ಲಿ ಉಡುಪಿಯ ವೈಟ್ ಲೋಟಸ್ ಹೋಟೆಲ್‌ನ ಪ್ರವರ್ತಕ ಅಜಯ್ ಪಿ. ಶೆಟ್ಟಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಗೀತಾಂಜಲಿ ಸುವರ್ಣ ಉಪಸ್ಥಿತರಿದ್ದರು, ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥರಾದ ಸುಷ್ಮಾ ಟಿ ಇವರು ಸ್ವಾಗತಿಸಿದರು. ಸಮಾಜಕಾರ್ಯ ವೇದಿಕೆಯ ಅಧ್ಯಕ್ಷರಾದ ಕು. ಸಾಕ್ಷಿ ಎ ಶೆಟ್ಟಿ ವಂದಿಸಿದರು ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರೋಶನ್ ಕುಮಾರ್ ಶೆಟ್ಟಿ, ಕಾರ್ಯಕ್ರಮ ನಿರೂಪಿಸಿದರು.
ಸಮಾರೋಪ ಸಮಾರಂಭದಲ್ಲಿ ಕಾಂಚನ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕರಾದ ಪ್ರಸಾದ್‌ರಾಜ್ ಕಾಂಚನ್, ಉಡುಪಿ ಮಾಜಿ ಶಾಸಕರಾದ ರಘುಪತಿ ಭಟ್, ಉಡುಪಿ ನಗರಸಭಾ ಸದಸ್ಯರಾದ ವಿಜಯ ಕೊಡವೂರು, ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ದ ಅಧ್ಯಕ್ಷರಾದ ರಮೇಶ್ ಕಾಂಚನ್, ಉದ್ಯಮಿಗಳಾದ ಪ್ರಪುಲ್ಲ ಶೆಟ್ಟಿ, ಉಡುಪಿ ನಗರಸಭೆಯ ನಾಮ ನಿರ್ದೇಶಿತ ಸದಸ್ಯರಾದ ಸದಾನಂದ ಮೂಲ್ಯ ಕಡ್ತಲ, ಬಿಲ್ಲಾಡಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷರಾದ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಕಾಲೇಜಿನ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ. ಗಣೇಶ್ ಪ್ರಸಾದ್ ಜಿ. ನಾಯಕ್, ಐಕ್ಯುಎಸಿ ಸಂಚಾಲಕರಾದ ಡಾ ವಿಷ್ಣುಮೂರ್ತಿ ಪ್ರಭು, ಶೈಕ್ಷಣಿಕ ಸಲಹೆಗಾರರಾದ ಶ್ರೀಧರ್ ಭಟ್, ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಗಳಾದ ರಾಜ್ ಕುಮಾರ್, ಸಂದೇಶ್ ಎಂ.ವಿ, ಸಹ ಪ್ರಾಧ್ಯಾಪಕರಾದ ಡಾ. ಹಮೀದ ಭಾನು ಬೇಗಂ, ಉಪಸ್ಥಿತರಿದ್ದರು ಸಮಾಜ ಕಾರ್ಯ ವಿಭಾಗ ಮುಖ್ಯಸ್ಥರಾದ ಸುಷ್ಮಾ ಟಿ., ಧನ್ಯವಾದ ಅರ್ಪಿಸಿದರು, ದೈಹಿಕ ಶಿಕ್ಷಣ ಬೋಧಕರಾದ ಡಾ. ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಕಾರ್ಯಕ್ರಮ ನಿರೂಪಣೆಯನ್ನು ವಿಜೇತಾ ಶೆಟ್ಟಿ ನಿರ್ವಹಿಸಿದರು.
ಸ್ಪರ್ಧೆ ವಿಜೇತರ ಪಟ್ಟಿ ಇಂತಿದೆ
ಕ್ವಿಜ್
ಪ್ರಥಮ : ಎಸ್.ಆರ್.ಎಸ್.ಎಂ.ಎನ್. ಸರಕಾರಿ ಪ್ರಥಮ ದರ್ಜೆ ಕಾಲೇಜು ಬಾರ್ಕೂರು
ದ್ವಿತೀಯ: ಎಸ್.ಎಂ.ಎಸ್. ಕಾಲೇಜು ಬ್ರಹ್ಮಾವರ
ಪೋಸ್ಟರ್ ಮೇಕಿಂಗ್
ಪ್ರಥಮ : ಇಸಿಆರ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬ್ರಹ್ಮಾವರ
ದ್ವಿತೀಯ: ಎಸ್.ಎಂ.ಎಸ್. ಕಾಲೇಜು ಬ್ರಹ್ಮಾವರ
ಕೊಲಾಜ್ ಮೇಕಿಂಗ್
ಪ್ರಥಮ : ಎಸ್.ಎಂ.ಎಸ್. ಕಾಲೇಜು ಬ್ರಹ್ಮಾವರ
ದ್ವಿತೀಯ: ಸೈಂಟ್ ಮೇರಿಸ್ ಕಾಲೇಜು ಶಿರ್ವ
ಪಿಪಿಟಿ ಪ್ರೆಸೆಂಟೇಶನ್
ಪ್ರಥಮ : ಕೆನರಾ ಕಾಲೇಜು ಉರ್ವ ಮಂಗಳೂರು
ದ್ವಿತೀಯ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಳೆಯಂಗಡಿ
ನೃತ್ಯ ಸ್ಪರ್ಧೆ
ಪ್ರಥಮ : ಸರಕಾರಿ ಪ್ರಥಮ ದರ್ಜೆ ಕಾಲೇಜು ಹಳೆಯಂಗಡಿ
ದ್ವಿತೀಯ: ಪೂರ್ಣಪ್ರಜ್ಞ ಕಾಲೇಜು ಉಡುಪಿ
ಬೀದಿ ನಾಟಕ
ಪ್ರಥಮ : ಆಳ್ವಾಸ್ ಕಾಲೇಜು ಮೂಡಬಿದ್ರೆ
ದ್ವಿತೀಯ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಳೆಯಂಗಡಿ
ರೀಲ್ಸ್ ಸ್ಪರ್ಧೆ
ಪ್ರಥಮ : ಎಸ್.ಡಿ.ಎಂ ಕಾಲೇಜು ಉಜಿರೆ
ದ್ವಿತೀಯ: ಎಂ.ಜಿ.ಎಂ. ಕಾಲೇಜು ಉಡುಪಿ
ಸಮಗ್ರ ಬಹುಮಾನ
ಪ್ರಥಮ: ಎಸ್.ಎಂ.ಎಸ್. ಕಾಲೇಜು ಬ್ರಹ್ಮಾವರ
ದ್ವಿತೀಯ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಳೆಯಂಗಡಿ
ತೃತೀಯ: ಎಸ್ ಆರ್ ಎಸ್ ಎಂ ಎನ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಾರ್ಕೂರು
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ




