ನಟ ಪ್ರೇಮ್ ರಿಂದ ಕಿದ್ವಾಯಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Upayuktha
0

ಹಂಸ ಸಾಂಸ್ಕೃತಿಕ -ಸಾಮಾಜಿಕ ಸಿಂಚನ; ಹಂಸ ಜ್ಯೋತಿ ಟ್ರಸ್ಟ್ ನಿಂದ 70ನೇ ಕನ್ನಡ ನಾಡ ಹಬ್ಬ

 



ಬೆಂಗಳೂರು: ಸುವರ್ಣ ಮಹೋತ್ಸವ ಸಂಭ್ರಮದಲ್ಲಿರುವ ಹಂತ ಜ್ಯೋತಿ ಟ್ರಸ್ಟ್ 70ನೇ ಕನ್ನಡ ನಾಡ ಹಬ್ಬದ ಪ್ರಯುಕ್ತ ಹಂಸ ಸಾಂಸ್ಕೃತಿಕ ಸಾಮಾಜಿಕ ಸಿಂಚನ ಕಾರ್ಯಕ್ರಮದ ಅಂಗವಾಗಿ ಬೆಂಗಳೂರು ನಗರದ ಕಿದ್ವಾಯಿ ಸ್ಮಾರಕ ಗ್ರಂಥಿ ಆಸ್ಪತ್ರೆಯ 1000 ರೋಗಿಗಳಿಗೆ ಉಚಿತವಾಗಿ ಹಣ್ಣು ಹಂಪಲು, ಬನ್ನು ಮತ್ತು ಸಿಹಿ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.


ಕಿದ್ವಾಯಿ ಸ್ಮಾರಕ ಗ್ರಂಥಿ ಆಸ್ಪತ್ರೆಯ ನಿರ್ದೇಶಕ ಡಾ. ಟಿ ನವೀನ್ ಸಮಾರಂಭ ಉದ್ಘಾಟಿಸಿದರು. ಹಿರಿಯ ರಂಗ ಸಂಘಟಕ ಶ್ರೀನಿವಾಸ ಜಿ ಕಪ್ಪಣ್ಣ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಖ್ಯಾತ ಚಲನಚಿತ್ರ ನಟ ಲವ್ಲಿ ಸ್ಟಾರ್ ಪ್ರೇಮ್ ಮಾತನಾಡುತ್ತ ಕಳೆದ 27 ವರ್ಷಗಳಿಂದ ದಾನಿಗಳ ನೆರವಿನಿಂದ ಈ ಉಪಯುಕ್ತ ಸೇವಾ ಕಾರ್ಯ ಮಾಡುತ್ತ ಸಾಗಿರುವ ಹಂಸಜ್ಯೋತಿ ಟ್ರಸ್ಟ್ ನ ಕಾರ್ಯ ಶ್ಲಾಘನೀಯ ಎಂದು ಆಭಿನಂದಿಸಿದರು.


ಮಾಜಿ ಶಾಸಕ ಎಸ್ ಬಾಲರಾಜ್, ಕರ್ನಾಟಕ ಪದ್ಮಶಾಲಿ ಸಂಘದ ಅಧ್ಯಕ್ಷ ಎನ್ ಜಗದೀಶ್, ಚಲನಚಿತ್ರ ನಿರ್ಮಾಪಕಿ ಡಾ. ಸುಕನ್ಯಾ ಹಿರೇಮಠ, ಹಂಸ ಜ್ಯೋತಿ ಟ್ರಸ್ಟ್ ನ ಸಂಸ್ಥಾಪಕ ವ್ಯವಸ್ಥಾಪಕ ಟ್ರಸ್ಟಿ ಎಂ ಮುರುಳಿಧರ ಮತ್ತು ಕಾರ್ಯನಿರ್ವಾಹಕ ಟ್ರಸ್ಟಿ, ವಿಜಯ ಮುರುಳಿಧರ ಮೊದಲಾದವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಹಲವು ಗಾಯಕರು ಕನ್ನಡ ಗೀತೆಗಳ ಗಾಯನದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top