ಅಡ್ಯನಡ್ಕ ಜನತಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

Upayuktha
0



ಅಡ್ಯನಡ್ಕ: ಅಡ್ಯನಡ್ಕ ಎಜುಕೇಶನಲ್ ಸೊಸೈಟಿ, ಜನತಾ ವಿದ್ಯಾಸಂಸ್ಥೆಗಳ ಹಿರಿಯ ವಿದ್ಯಾರ್ಥಿ ಸಂಘ ಅಡ್ಯನಡ್ಕ, ಲಯನ್ಸ್ ಕ್ಲಬ್, ಕದ್ರಿ ಹಿಲ್ಸ್ ಮಂಗಳೂರು, ಲಯನ್ಸ್ ಕ್ಲಬ್ ವಿಟ್ಲ ಸಿಟಿ, ರೋಟರಿ ಕ್ಲಬ್ ವಿಟ್ಲ ಇವರ ಜಂಟಿ ಆಶ್ರಯದಲ್ಲಿ ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಮತ್ತು ಕಣಚೂರು ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆ ನಾಟೆಕಲ್ ಮಂಗಳೂರು ಇವರ ಸಹಯೋಗದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ, ಇಂಡಿಯನ್ ಕ್ಯಾನ್ಸರ್ ಸೊಸೈಟಿ ಕರ್ನಾಟಕ ಇವರಿಂದ ಕ್ಯಾನ್ಸರ್ ಕಾಯಿಲೆ ಮುಂಜಾಗ್ರತಾ ಮಾಹಿತಿ ಮತ್ತು ತಪಾಸಣೆ, ಪುತ್ತೂರು ರೋಟರಿ ಬ್ಲಡ್ ಬ್ಯಾಂಕ್ ಸಹಯೋಗದಲ್ಲಿ ರಕ್ತದಾನ ಶಿಬಿರ ಮತ್ತು ಇನ್ನರ್‌ವೀಲ್ ಕ್ಲಬ್ ಪುತ್ತೂರು ಇವರಿಂದ ಉಚಿತ ಔಷಧ ವಿತರಣಾ ಕಾರ್ಯಕ್ರಮ ನವೆಂಬರ್ 16ರಂದು ಅಡ್ಯನಡ್ಕದ ಜನತಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.


ಆರೋಗ್ಯ ಶಿಬಿರವನ್ನು ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಗಳ ಸಂಚಾಲಕರಾದ ಡಾ. ಅಶ್ವಿನಿ ಕೃಷ್ಣಮೂರ್ತಿ ಅವರು ದೀಪ ಬೆಳಗಿ ಉದ್ಘಾಟಿಸಿದರು. ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಅಧ್ಯಕ್ಷರಾದ ಗೋವಿಂದ ಪ್ರಕಾಶ್ ಸಾಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಮಂಗಳೂರಿನ ಕಣಚೂರು ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ವ್ಯವಸ್ಥಾಪಕರಾದ ಅಬ್ದುಲ್ಲಾ ಎಂ. ಖಾನ್, ಕಣಚೂರು ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆಯ ವೈದ್ಯಕೀಯ ಸಲಹೆಗಾರರಾದ ಡಾ. ಸುರೇಶ್ ನೆಗಳಗುಳಿ, ಮಂಗಳೂರು ಯೇನೆಪೋಯ ಮೆಡಿಕಲ್ ಕಾಲೇಜಿನ ಹೆಮೆಟೋ ಆಂಕೋಲಜಿ ವಿಭಾಗದ ಮುಖ್ಯಸ್ಥ ಹಾಗೂ ಮೂಳೆ ಮಜ್ಜೆಯ ಕಸಿ ತಜ್ಞರಾದ ಡಾ. ರಾಜೇಶ್ ಕೃಷ್ಣ, ಮಂಗಳೂರು ಕೆಎಂಸಿ ಆಸ್ಪತ್ರೆಯ ರಕ್ತಶಾಸ್ತ್ರ ತಜ್ಞರಾದ ಡಾ. ಪ್ರಶಾಂತ್ ಬಿ., ಲಯನ್ಸ್ ಜಿಲ್ಲಾ ಪಿಆರ್‌ಒ ಲ| ವಿ. ಎನ್ ಸುದರ್ಶನ್ ಪಡಿಯಾರ್, ಲಯನ್ಸ್ ಕ್ಲಬ್ ಮಂಗಳೂರು ಅಧ್ಯಕ್ಷ ಲ| ಸಂಜೀವ ಗೌಡ ಕತ್ಲಡ್ಕ ಇವರು ಶುಭನುಡಿಗಳನ್ನಾಡಿದರು. ಲಯನ್ಸ್ ಕ್ಲಬ್ ವಿಟ್ಲ ಸಿಟಿ ಅಧ್ಯಕ್ಷೆ ಲ. ಶ್ವೇತಾ ರವಿಕುಮಾರ್, ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಆಡಳಿತಾಧಿಕಾರಿ ರಮೇಶ್ ಎಂ. ಬಾಯಾರು, ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಕೋಶಾಧಿಕಾರಿ ಕೇಶವ ಭಟ್ ಚವರ್ಕಾಡು, ರೋಟರಿ ಕ್ಲಬ್ ವಿಟ್ಲ ಕಾರ್ಯದರ್ಶಿ ರೊ. ದಿನೇಶ್‌ಕುಮಾರ್, ಲಯನ್ಸ್ ಕ್ಲಬ್ ಪುತ್ತೂರು ಅಧ್ಯಕ್ಷೆ ಲ. ವೇದಾವತಿ, ಜನತಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಿರೀಶ್ ಮುಳಿಯಾಲ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಅಡ್ಯನಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಆರೋಗ್ಯ ಸುರಕ್ಷಾಧಿಕಾರಿ ರಾಧಾ ಸಿಸ್ಟರ್ ಹಾಗೂ ನಿವೃತ್ತ ಆಶಾ ಕಾರ್ಯಕರ್ತೆ ಲಕ್ಷ್ಮೀ ಕಮ್ಮಾರು ಅವರನ್ನು ಸನ್ಮಾನಿಸಲಾಯಿತು. ಜನತಾ ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಎಂ.ಕುಂಞ ನಾಯ್ಕ್ ಹಾಗೂ ಜನತಾ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಭವ್ಯ ಆರ್ ಶೆಟ್ಟಿ ಸನ್ಮಾನ ಪತ್ರ ವಾಚಿಸಿದರು.
ಜನತಾ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಸ್ಫೂರ್ತಿಗೀತೆ ಹಾಡಿದರು. ಜನತಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಿರೀಶ್ ಮುಳಿಯಾಲ ಸ್ವಾಗತಿಸಿ, ಜನತಾ ಪದವಿಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ವೀಣಾ ಟಿ. ವಂದಿಸಿದರು. ಕನ್ನಡ ಶಿಕ್ಷಕ ಶಿವಕುಮಾರ್ ಸಾಯ ಹಾಗೂ ಕನ್ನಡ ಉಪನ್ಯಾಸಕ ಕೆ. ಶೀನಪ್ಪ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು.
ಉದ್ಘಾಟನಾ ಕಾರ್ಯಕ್ರಮದ ಬಳಿಕ ಕಣಚೂರು ವೈದ್ಯಕೀಯ ಕಾಲೇಜಿನ ವೈದ್ಯರಾದ ಡಾ. ಪ್ರವಿತಾ ಅವರು ಕ್ಯಾನ್ಸರ್ ಕಾಯಿಲೆಯ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಇನ್ನರ್‌ವೀಲ್ ಕ್ಲಬ್ ಪುತ್ತೂರು ಇದರ ಕಾರ್ಯದರ್ಶಿ ಸಂಧ್ಯಾ ಸಾಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಆರೋಗ್ಯ ಶಿಬಿರದಲ್ಲಿ ವಿವಿಧ ವಿಭಾಗಗಳ ವೈದ್ಯಕೀಯ ಶಾಸ್ತ್ರ ತಜ್ಞರು, ಮಕ್ಕಳ ತಜ್ಞರು, ಮೂಳೆ ತಜ್ಞರು, ಶಸ್ತ್ರ ಚಿಕಿತ್ಸಾ ತಜ್ಞರು, ಸ್ತ್ರೀ ರೋಗ ಮತ್ತು ಪ್ರಸೂತಿ ತಜ್ಞರು, ಕಿವಿ ಮೂಗು ಗಂಟಲು ತಜ್ಞರು, ನೇತ್ರ ತಜ್ಞರು ಆರೋಗ್ಯ ತಪಾಸಣೆ ನಡೆಸಿದರು. 'ಆಭಾ ಕಾರ್ಡ್' ನೋಂದಾವಣೆ ಉಚಿತವಾಗಿ ಮಾಡಲಾಯಿತು. ಮುಳಿಯಾಲ ಶ್ರೀ ಉಳ್ಳಾಕುಲು ರಾಜ್ಯದೈವ ಪಂಜುರ್ಲಿ ದೈವಗಳ ಸೇವಾ ಸಮಿತಿ ವತಿಯಿಂದ ಉಪಾಹಾರ ಮತ್ತು ಭೋಜನವನ್ನು ವ್ಯವಸ್ಥೆಗೊಳಿಸಲಾಗಿತ್ತು.


ಕೇಪು ಗ್ರಾಮ ಪಂಚಾಯತು, ಪ್ರಾಥಮಿಕ ಆರೋಗ್ಯ ಕೇಂದ್ರ, ಅಡ್ಯನಡ್ಕ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ), ಅಡ್ಯನಡ್ಕ ಒಕ್ಕೂಟ, ದಿವ್ಯಶಕ್ತಿ ಯುವಕ ಮಂಡಲ (ರಿ), ಕುದ್ದುಪದವು, ದಿವ್ಯಶಕ್ತಿ ಯುವತಿ ಮಂಡಲ (ರಿ), ಕುದ್ದುಪದವು, ಶ್ರೀ ದುರ್ಗಾಪರಮೇಶ್ವರಿ ಅಯ್ಯಪ್ಪಸ್ವಾಮಿ ಭಜನಾ ಮಂದಿರ (ರಿ), ಅಡ್ಯನಡ್ಕ, ಶ್ರೀಕೃಷ್ಣ ಯುವಕ ಸಂಘ ಕೂಟೇಲು, ಪುಣಚ ಸೇವಾ ಸಹಕಾರಿ ಸಂಘ, ಅಡ್ಯನಡ್ಕ, ಎಸ್.ಜಿ.ಆರ್. ಶಾಮಿಯಾನ, ಅಡ್ಯನಡ್ಕ, ಯಾದವ ಸಭಾ, ತಾಲೂಕು ಸಮಿತಿ, ಬಂಟ್ವಾಳ, ಭಾರತೀಯ ಮಜ್ದೂರ್ ಸಭಾ, ಅಡ್ಯನಡ್ಕ, ಗುರೂಜಿ ಯುವಕ ಮಂಡಲ, ಅಡ್ಯನಡ್ಕ, ಮುಳಿಯಾಲ ಶ್ರೀ ಉಳ್ಳಾಕುಲು ರಾಜ್ಯದೈವ ಪಂಜುರ್ಲಿ ದೈವಗಳ ಸೇವಾ ಸಮಿತಿ, ಶ್ರೀ ವಿಷ್ಣುಮೂರ್ತಿ ಯುವಕ ಮಂಡಲ ಕೊಲ್ಲಪದವು - ಈ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಕಾರ್ಯಕ್ರಮ ಸಂಘಟನೆಯಲ್ಲಿ ಸಹಕರಿಸಿರುತ್ತಾರೆ.


ವೈದ್ಯಕೀಯ ಅಧಿಕಾರಿಗಳು, ಜನತಾ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿ, ಉಸ್ತುವಾರಿ ಅಧಿಕಾರಿಗಳು, ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಹಿರಿಯ ವಿದ್ಯಾರ್ಥಿ ಸಂಘ, ಸ್ಥಳೀಯ ಸಂಘಟನೆಗಳ ಪ್ರಮುಖರು ಹಾಗೂ ವಿದ್ಯಾರ್ಥಿ ಸ್ವಯಂ ಸೇವಕರು ಒಟ್ಟಾಗಿ ಸಹಕರಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿರುತ್ತಾರೆ.



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Advt Slider:
To Top