ಆಳ್ವಾಸ್: ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ

Chandrashekhara Kulamarva
0


ಮೂಡುಬಿದಿರೆ: ಆಳ್ವಾಸ್ ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜಿನಲ್ಲಿ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನ ವನ್ನು ಆಚರಿಸಲಾಯಿತು.


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಕಾಲೇಜಿನ ಡೀನ್ ಡಾ. ಗೀತಾ ಬಿ. ಶೆಟ್ಟಿ ಪ್ರಕೃತಿ ಚಿಕಿತ್ಸಾ ದಿನಾಚರಣೆಯು ಕೇವಲ ಆಚರಣೆಯ ಮಟ್ಟಕ್ಕೆ ಸೀಮಿತವಾಗದೆ, ರೋಗ ನಿವಾರಣೆ ಮತ್ತು ಚಿಕಿತ್ಸೆಯ ನೆಲೆಯಲ್ಲಿ, ಸಮಾಜಕ್ಕೆ ನೈಜ ಪರಿಹಾರ ನೀಡುವಂತಾಗಬೇಕು. ಪ್ರಕೃತಿ ಚಿಕಿತ್ಸೆಯ ವೈಜ್ಞಾನಿಕ ತತ್ವಗಳನ್ನು ಜನಸಾಮಾನ್ಯರಿಗೆ ಸರಳವಾಗಿ ಅರ್ಥವಾಗುವ ರೀತಿಯಲ್ಲಿ ಪರಿಚಯಿಸುವ ಜವಾಬ್ದಾರಿ ನಾವೆಲ್ಲದ್ದಾಗಿದೆ. ಅಲ್ಲದೆ ಚಿಕಿತ್ಸೆಯ ಪರಿಣಾಮಕಾರಿತ್ವವನ್ನು ದೃಢಪಡಿಸಲು ವೈಜ್ಞಾನಿಕ ದಾಖಲೆ ಸಂಗ್ರಹಣೆ ಅತ್ಯಾವಶ್ಯಕ, ಎಂದು ತಿಳಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆಳ್ವಾ ಫಾರ್ಮಸಿಯ  ಮುಖ್ಯ  ಕಾರ್ಯನಿರ್ವಹಣಾಧಿಕಾರಿ ಡಾ. ಗ್ರೀಷ್ಮ ವಿವೇಕ್ ಆಳ್ವ ಮಾತನಾಡಿ, ಪ್ರಕೃತಿ ಚಿಕಿತ್ಸಾ ವಿದ್ಯಾರ್ಥಿಗಳು ಮತ್ತು ವೈದ್ಯರು ಆತ್ಮವಿಶ್ವಾಸ, ಸೇವಾಭಾವದಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.


ದಿನಾಚರಣೆ ಅಂಗವಾಗಿ ಕಾಲೇಜಿನಲ್ಲಿ ವಿವಿಧ ಸ್ಪರ್ಧೆಗಳು ಏರ್ಪಡಿಸಲಾಗಿದ್ದು, ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಕಾಲೇಜಿನ ಪ್ರಾಂಶುಪಾಲೆ ಡಾ. ವನಿತಾ ಶೆಟ್ಟಿ ಸ್ವಾಗತ ಕೋರಿದರು.


ದ್ವಿತೀಯ ವರ್ಷದ ವಿದ್ಯಾರ್ಥಿನಿ ಫಿದಾ ಅಂಜು ಕಾರ್ಯಕ್ರಮ ನಿರೂಪಿಸಿ,  ಡಾ. ಆಕಾಶ್  ವಂದಿಸಿದರು.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top