ಅಟಲ್ ವಿರಾಸತ್ ಕಾರ್ಯಕ್ರಮದಲ್ಲಿ ಗುರುತಿಸಿ ಗೌರವಿಸಲು ಮನವಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆಯಲಿರುವ ದೇಶ ಕಂಡ ಸಜ್ಜನ ರಾಜಕಾರಣಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನದ ಅಟಲ್ ವಿರಾಸತ್ ಕಾರ್ಯಕ್ರಮದಲ್ಲಿ ಅವರೊಂದಿಗೆ 2 ವರ್ಷಗಳ ಕಾಲ ಚಾಲಕರಾಗಿ ಸೇವೆ ಸಲ್ಲಿಸಿದ್ದ ಕೊಡಗು ಮದೆನಾಡು ಮೂಲದ ಬಟ್ಯನ ಚಿನ್ನಪ್ಪ ಕುಶಾಲಪ್ಪ ಅವರನ್ನು ಗುರುತಿಸುವ ಕಾರ್ಯ ಆಗಬೇಕಿದೆ ಎಂದು NSCDF ಅಧ್ಯಕ್ಷ ಗಂಗಾಧರ್ ಗಾಂಧೀ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.
ಅವರು ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅವರ ಸುದ್ದಿಗೋಷ್ಠಿಯ ವಿಷಯ ತಿಳಿದು ಗಂಗಾಧರ್ ಗಾಂಧೀ ಈ ವಿಚಾರ ಪ್ರಸ್ತಾಪ ಮಾಡಿದ್ದಾರೆ ಮತ್ತು ಈ ಮಹತ್ವ ಪೂರ್ಣ ಕಾರ್ಯಕ್ರಮದಲ್ಲಿ ವಾಜಪೇಯಿ ಅವರೊಂದಿಗೆ ಕೆಲಸ ಮಾಡಿರುವ ಕುಶಾಲಾಪ್ಪರನ್ನು ಗುರುತಿಸಿದರೆ ಕಾರ್ಯಕ್ರಮಕ್ಕೆ ಶೋಭೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ



