ಬಾಗಲಕೋಟೆ: ವಿದ್ಯಾರ್ಥಿಗಳು ತಮ್ಮ ತಂದೆ ತಾಯಿಯನ್ನು ವಿದ್ಯೆ ಕಲಿಸಿದ ಗುರುಗಳನ್ನು ಸದಾ ಸ್ಮರಿಸುತ್ತಿರಬೇಕು ಅವರಿಗೆ ಗೌರವ ನೀಡಬೇಕು. ಸದಾಕಾಲ ಅವರ ಸೇವೆಯೊಂದಿಗೆ ನಿಮ್ಮ ಜೀವನವನ್ನು ಸಾರ್ಥಕಪಡಿಸಿಕೊಳ್ಳುವದರ ಜೊತೆಗೆ ಉತ್ತಮ ವಿದ್ಯೆ ಹೊಂದಿ ನಮ್ಮ ದೇಶದ ಉತ್ತಮ ಪ್ರಜೆಗಳಾಗಬೇಕು, ವಿದ್ಯೆಯಿಂದ ಜೀವನ ಸಮೃದ್ದಿ ಇದ್ದು ಅದನ್ನು ಉಪಯೋಗಿಸಿಕೊಳ್ಳಬೇಕು ಎಂದು ಹುಬ್ಬಳ್ಳಿ ಹೊಸೂರಿನ ಪರಮಪೂಜ್ಯ ಜಗದ್ಗುರುಗಳಾದ ಪೂಜ್ಯ ಶ್ರೀ ಚಂದ್ರಶೇಖರ ಮಹಾಸ್ವಾಮಿಗಳು ಅಕ್ಕಿಹೊಂಡ ಇವರು ಕರೆ ನೀಡಿದರು.
ಅವರು ಜಿಲ್ಲೆಯ ಇಲಕಲ್ಲ ತಾಲೂಕಿನ ಕಂದಗಲ್ಲ ಗ್ರಾಮದ ವಿಶ್ವ ಚೇತನ ಪಬ್ಲಿಕ್ ಶಾಲೆಯ "ಗುರುಮಹಾಂತ ರಂಗಮಂದಿರ"ದಲ್ಲಿ 'ಶ್ರೀಗಳ ಆಶೀರ್ವಚನ' ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.
ಶಾಲೆಯ ಸಂಸ್ಥಾಪಕರಾದ ಸಂಗಣ್ಣ ಎಸ್ ಹವಾಲ್ದಾರ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶ್ರೀಗಳ ಪಾದಪೂಜೆಯನ್ನು ಕು. ಆದರ್ಶ ಹವಾಲ್ದಾರ್ ನೆರವೇರಿಸಿ ಆಶೀರ್ವಾದ ಪಡೆದರು. ಕಾರ್ಯಕ್ರಮದ ನಿರೂಪಣೆ ಗುರುಮಾತೆ ಕು. ಭವ್ಯಶ್ರೀ ಭಂಡಾರಿ, ಗುರುಗಳಾದ ಕು. ಅಜಯ್ ಹೆಚ್. ಸ್ವಾಗತ ಹಾಗೂ ವಂದನಾರ್ಪಣೆಯನ್ನು ಗುರುಮಾತೆ ಕು. ನಂದಿನಿ ನಾಯ್ಕ ಮಾಡಿದರು. ಶಾಲೆಯ ಎಲ್ಲಾ ಶಿಕ್ಷಕವೃಂದ, ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು, ಪಾಲಕವೃಂದ, ಆಡಳಿತ ಮಂಡಳಿಯವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ







