ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ಬ್ಯಾಂಕಿಂಗ್ ವ್ಯವಹಾರಗಳ ಮಾಹಿತಿ ಕಾರ್ಯಾಗಾರ

Upayuktha
0


ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವಾಣಿಜ್ಯ ಸಂಘದ ಆಶ್ರಯದಲ್ಲಿನ 24 ರಂದು ಕಾಲೇಜು ಸಭಾಂಗಣದಲ್ಲಿ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ವ್ಯವಹಾರಗಳ  ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು.


ಕಾರ್ಯಕ್ರಮದ  ಸಂಪನ್ಮೂಲ ವ್ಯಕ್ತಿಗಳಾದ ಬೆಳ್ತಂಗಡಿ ಅಮೂಲ್ಯ ಫೈನಾನ್ಸಿಯಲ್ ಲಿಟರಸಿ ಸೆಂಟರ್ ಇದರ ಸಲಹೆಗಾರರಾದ ಉಷಾ ವಿ ನಾಯಕ್ ಮಾತನಾಡಿ, ಬ್ಯಾಂಕಿಂಗ್ ವ್ಯವಹಾರದಲ್ಲಿ ಆಗಿರುವ ಬೆಳವಣಿಗೆಗಳ ಬಗ್ಗೆ ತಿಳಿಸಿದ ಅವರು, ಬ್ಯಾಂಕಿಂಗ್ ಕ್ಷೇತ್ರದ ಮೂಲಭೂತ ಅವಶ್ಯಕತೆಗಳು ಮತ್ತು ಅವುಗಳ ಮಹತ್ವವನ್ನು ತಿಳಿಸಿದರು. ಇಂದು ಮೊಬೈಲ್ ಬ್ಯಾಂಕಿಂಗ್ ಅತ್ಯಂತ ಮಹತ್ವದ್ದಾಗಿದ್ದು, ಅದರ ಜೊತೆಗೆ ಇರುವ ಭದ್ರತಾ ಬೆದರಿಕೆಗಳ ಬಗ್ಗೆ ಕೂಡ ತಿಳಿಸಿದರು. ಗ್ರಾಮೀಣ ಬ್ಯಾಂಕುಗಳು ಗ್ರಾಹಕರ ಅವಶ್ಯಕತೆಗಳಿಗೆ ಸ್ಪಂದಿಸಿದರೆ, ದೇಶದ ಪ್ರಗತಿ ಸಾಧ್ಯ ಎಂಬುದನ್ನು ಒತ್ತಿ ಹೇಳಿದ ಅವರು, ಬ್ಯಾಂಕಿಂಗ್ ಕ್ಷೇತ್ರದ ಉದ್ಯೋಗಾವಕಾಶಗಳ ಮಾಹಿತಿಯನ್ನು ಕೂಡ ವಿದ್ಯಾರ್ಥಿಗಳಿಗೆ ನೀಡಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ವಾಣಿಜ್ಯ ವಿಭಾಗವು ಒಂದು ಕ್ರಿಯಾತ್ಮಕ ವಿಭಾಗವಾಗಿದ್ದು, ವಿದ್ಯಾರ್ಥಿಗಳು ವಾಣಿಜ್ಯ ಕ್ಷೇತ್ರದಲ್ಲಿ ಆಗುತ್ತಿರುವ ಬದಲಾವಣೆಗಳ ಬಗ್ಗೆ ಅರಿವನ್ನು ಹೊಂದಿರಬೇಕು. ಮುಖ್ಯವಾಗಿ ಇಂದು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಯಾಗಿದ್ದು, ವಿದ್ಯಾರ್ಥಿಗಳು, ಬ್ಯಾಂಕಿನ ಕಾರ್ಯನಿರ್ವಹಣೆಯ ಬಗೆಗೆ ಅಧ್ಯಯನವನ್ನು ಮಾಡಬೇಕಾಗಿದೆ. ಸೂಕ್ತ ಮಾಹಿತಿಯೊಂದಿಗೆ ನಾವು ಕಲಿತಾಗ ಕಲಿಕೆ ಪರಿಣಾಮಕಾರಿ ಆಗುವುದರೊಂದಿಗೆ, ಸಾಕಷ್ಟು ಅನುಭವವನ್ನು ಪಡೆಯಬಹುದು ಎಂದು ಹೇಳಿದರು.


ವೇದಿಕೆಯಲ್ಲಿ ವಾಣಿಜ್ಯ ಸಂಘದ ನಿರ್ದೇಶಕ ಭರತ್ ಜಿ ಫೈ ಹಾಗೂ ಪೂರ್ಣಿಮಾ ಡಿ. ಎಸ್ ಉಪಸ್ಥಿತರಿದ್ದರು. ಕಾಲೇಜಿನ ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವರ್ಗ ಮತ್ತು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ಪ್ರದರ್ಶನ ಕಲಾ ಸಂಘದ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿಗಳಾದ ಏಂಜಲ್ ಡಿ' ಸೋಜಾ ಸ್ವಾಗತಿಸಿ, ದಯನ್ ದೇವಯ್ಯ ವಂದಿಸಿ, ಬಿ ವಿ ಅನು ಕಾರ್ಯಕ್ರಮ ನಿರೂಪಿಸಿದರು.



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Advt Slider:
To Top