ಬಿಹಾರದ ಪ್ರಚಂಡ ಗೆಲುವು- ಪ್ರಧಾನಿ ನಾಯಕತ್ವಕ್ಕೆ ಸಂದ ಜಯ: ನಳಿನ್ ಕುಮಾರ್ ಕಟೀಲ್

Upayuktha
0


ಮಂಗಳೂರು: ಬಿಹಾರದಲ್ಲಿ ಚುನಾವಣಾ ಫಲಿತಾಂಶದ ಕುರಿತು ಮಂಗಳೂರಿನಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಹಾಗೂ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಕಾಂಗ್ರೆಸ್ ನಾಯಕರ ವೋಟ್ ಚೋರಿ ಸುಳ್ಳು ಆರೋಪಕ್ಕೆ ಬಿಹಾರ ರಾಜ್ಯದ ಜನತೆ ತಕ್ಕ ಉತ್ತರ ಕೊಟ್ಟಿದ್ದಾರೆ. ಅಲ್ಲದೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಕೈಗೊಂಡಿರುವ ಅಭಿವೃದ್ಧಿ ಕಾರ್ಯವನ್ನು ಜನರು ನೆಚ್ಚಿಕೊಂಡಿದ್ದಾರೆ. ಹೀಗಾಗಿ ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ಭರ್ಜರಿ ಜಯ ಸಿಕ್ಕಿದೆ ಎಂದು ಹೇಳಿದರು.


ದೇಶದಲ್ಲಿ ಪಕ್ಷ ಇನ್ನೂ ಬಲಿಷ್ಠವಾಗಿ ಸಂಘಟನೆಯಾಗಲಿದೆ ಎಂದು ಹೇಳಿದರು. ಈ ಚುನಾವಣಾ ಫಲಿತಾಂಶ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ಅಸ್ತಿತ್ವಕ್ಕೂ ಧಕ್ಕೆ ತರಲಿದೆ ಎಂದು ಅಭಿಪ್ರಾಯ ಪಟ್ಟರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Advt Slider:
To Top