ಉಡುಪಿ: ಮಹಾತ್ಮಾ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನಲ್ಲಿ ವಾಣಿಜ್ಯ ಮತ್ತು ನಿರ್ವಹಣಾ ಸಂಘದ ಉದ್ಘಾಟನಾ ಕಾರ್ಯಕ್ರಮವು ಮೋಹಂದಾಸ್ ಪೈ ಪ್ಲಾಟಿನಂ ಜುಬಿಲಿ ಬ್ಲಾಕ್ ಸಭಾಂಗಣದಲ್ಲಿ ನೆರವೇರಿತು.
ಕಾರ್ಯಕ್ರಮವನ್ನು ವಿ-ರೀಚ್ ಅಕಾಡೆಮಿ ಸಂಸ್ಥಾಪಕರಾದ CS ಸಂತೋಷ್ ಪ್ರಭು ಉದ್ಘಾಟಿಸಿದರು. ಅವರು ವಿದ್ಯಾರ್ಥಿಗಳಲ್ಲಿ ವಾಣಿಜ್ಯ ಶಿಕ್ಷಣದ ಅಗತ್ಯತೆ, ನಿರ್ವಹಣಾ ಕೌಶಲ್ಯದ ಮಹತ್ವ ಹಾಗೂ ನೈಜ ಜೀವನದಲ್ಲಿ ನಿರ್ವಹಣಾ ಮೌಲ್ಯಗಳ ಅನ್ವಯದ ಕುರಿತು ಪ್ರೇರಣಾದಾಯಕವಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದಡಾ. ದೇವಿದಾಸ್ ಎಸ್. ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.
ಬಿ.ಕಾಂ ಮತ್ತು ಬಿ.ಬಿ.ಎ ಸಂಯೋಜಕರಾದ ಡಾ. ಮಲ್ಲಿಕಾ ಎ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿ ಪ್ರಸ್ತಾವಿಕ ನುಡಿಗಳನ್ನಾಡಿದರು. ವಾಣಿಜ್ಯ ಮತ್ತುನಿರ್ವಹಣಾ ಸಂಘದ ಸಂಯೋಜಕರಾದ ಕು. ಕಾವ್ಯಶ್ರೀ ಉಪಸ್ಥಿತರಿದ್ದರು.
ಅತಿಥಿ ಪರಿಚಯವನ್ನು ವಾಣಿಜ್ಯ ಮತ್ತು ನಿರ್ವಹಣಾ ಸಂಘದ ಸಹಕಾರ್ಯದರ್ಶಿಯಾದ ದಿಶಾನ್ (ದ್ವಿತೀಯ ಬಿ.ಕಾಂ) ನೀಡಿ, ಕಾರ್ಯದರ್ಶಿದಿಶಾ (ತೃತೀಯ ಬಿ.ಕಾಂ) ಕೃತಜ್ಞತೆ ಸೂಚಿಸಿದರು. ಕಾರ್ಯಕ್ರಮವನ್ನು ಫಾಲ್ಗುಣಿ (ತೃತೀಯ ಬಿ.ಕಾಂ) ನಿರೂಪಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


