ಮುಂಡಾಜೆ: ಶಾಸಕಾಂಗ ಕಾರ್ಯಾಂಗ ಮತ್ತು ನ್ಯಾಯಾಂಗಗಳು ಸ್ವತಂತ್ರವಾಗಿದ್ದರೂ ಪರಸ್ಪರ ಪೂರಕವಾಗಿ ಕೆಲಸ ನಿರ್ವಹಿಸಬೇಕು. ಆದರೆ ಸುಮಾರು 88000 ಇತ್ಯರ್ಥವಾಗದ ವ್ಯಾಜ್ಯಗಳಿದ್ದರೂ ಅದನ್ನು ಇತ್ಯರ್ಥಪಡಿಸದೆ ಸುಪ್ರೀಂ ಕೋರ್ಟ್ ತನ್ನ ಅತಿಯಾದ ಕ್ರಿಯಾಶೀಲತೆಯಿಂದಾಗಿ ಶಾಸಕಾಂಗ ಮತ್ತು ಕಾರ್ಯಾಂಗದ ಕಾರ್ಯನಿರ್ವಹಣೆಯ ಮೇಲೆ ಹಸ್ತಕ್ಷೇಪ ನಡೆಸಿದಂತೆ ಇತ್ತೀಚೆಗೆ ಕಂಡು ಬರುತ್ತಿದೆ ಎಂದು ರಾಜ್ಯಶಾಸ್ತ್ರ ಉಪನ್ಯಾಸಕ ಸುಭಾಸ್ ಚಂದ್ರ ಜೈನ್ ಅಭಿಪ್ರಾಯಪಟ್ಟರು.
ಅವರು ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ನ.26 ರಂದು ನಡೆದ ಸಂವಿಧಾನ ದಿನಾಚರಣೆಯಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನದ ಕುರಿತು ರಸಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಆಂಗ್ಲ ಭಾಷಾ ಉಪನ್ಯಾಸಕ ಪುರುಷೋತ್ತಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ನಮಿತಾ ಕೆ ಆರ್ ಕಾರ್ಯಕ್ರಮವನ್ನು ಸಂಯೋಜಿಸಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ




