ತೆಂಕನಿಡಿಯೂರು ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Upayuktha
0


ತೆಂಕನಿಡಿಯೂರು: ಸರಕಾರಿ ಪ್ರಥಮದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ಐಕ್ಯೂಎಸಿ, ರಾಜಕೀಯಶಾಸ್ತ್ರ ವಿಭಾಗ ಮತ್ತು ಚುನಾವಣಾ ಸಾಕ್ಷರತಾ ಕ್ಲಬ್ ಇವರ ಜಂಟಿಆಶ್ರಯದಲ್ಲಿ ಸಂವಿಧಾನ ದಿನಾಚರಣೆ ಆಚರಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಸರಕಾರಿ ಪದವಿಪೂರ್ವ ಕಾಲೇಜು ತೆಂಕನಿಡಿಯೂರು ಇಲ್ಲಿನ ರಾಜಕೀಯಶಾಸ್ತ್ರ ಉಪನ್ಯಾಸಕ ವಾಸುಮೊಗೇರ್ವ ವಿದ್ಯಾರ್ಥಿಗಳನ್ನುದ್ದೇಶಿ ಸಿಮಾತನಾಡುತ್ತಾ "ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಎದುರಾಗುವ ಅಪಾಯಗಳನ್ನು ಎದುರಿಸುವ ಪ್ರಜ್ಞಾವಂತಿಕೆಯನ್ನು ಪ್ರಜೆಗಳು ಬೆಳೆಸಿಕೊಂಡಾಗ ಮಾತ್ರ ಸಂವಿಧಾನದ ಆಶಯಗಳು ಸಾಕಾರಗೊಳ್ಳಲು ಸಾಧ್ಯ" ಎಂದರು.


ಮುಖ್ಯ ಅತಿಥಿಗಳಾಗಿ ತೆಂಕನಿಡಿಯೂರು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಶ್ವನಾಥ ಕರಬ "ಸಂವಿಧಾನ ಸಾರುವ ಮೌಲ್ಯಗಳೆಲ್ಲವೂ ಮಾನವೀಯ ಮೌಲ್ಯಗಳಾಗಿರುವುದರಿಂದ ಅದು ನಮ್ಮ ಬದುಕಿನ ಮೌಲ್ಯಗಳು ಮತ್ತು ಗೌರವಿಸುವುದು ನಮ್ಮ ನಾಗರಿಕ ಜವಾಬ್ದಾರಿ" ಎಂದರು.


ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ನಿತ್ಯಾನಂದ ವಿ ಗಾಂವ್ಕರ್ " ಸಂವಿಧಾನದ ಮೌಲ್ಯಗಳನ್ನು ಯುವ ಜನತೆ ಹೆಚ್ಚಾಗಿ ಅರಿತುಕೊಳ್ಳುವ ಅವಶ್ಯಕತೆ ಇದೆ" ಎಂದರು.


ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರಶಾಂತ್  ನೀಲಾವರ ಕಾರ್ಯಕ್ರಮದ ಔಚಿತ್ಯವನ್ನು ತಿಳಿಸಿದರೆ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ರಾಜ್‌ಕುಮಾರ್, ಸಂದೇಶ್, ಐಕ್ಯೂಎಸಿ ಸಂಚಾಲಕರಾದ ಡಾ. ವಿಷ್ಣುಮೂರ್ತಿ ಪ್ರಭು, ರಾಜ್ಯಶಾಸ್ತ್ರ ಉಪನ್ಯಾಸಕರಾದ ಆರತಿ ಜಿ, ಹಾಗೂ ಗ್ರಂಥಪಾಲಕರಾದ ಕೃಷ್ಣ ಸಾಸ್ತಾನ, ಬೋಧಕ -ಬೋಧಕೇತರ ವೃಂದದವರು ಕಾರ್ಯಕ್ರಮದಲ್ಲಿ ಭಾಗಿಯಾದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Advt Slider:
To Top