ಮಂಗಳೂರು: ಮಹಾತ್ಮ ಗಾಂಧಿ ಮೆಮೋರಿಯಲ್ ಸಂಧ್ಯಾ ಕಾಲೇಜಿನಲ್ಲಿ ದೀಪಾವಳಿ ಆಚರಣೆ – ಕಾರ್ಯಕ್ರಮವನ್ನು ಕಾಲೇಜಿನ ಬ್ಯಾಸ್ಕೆಟ್‌ಬಾಲ್ ಮೈದಾನದಲ್ಲಿ “ಬೆಳಕು ಮತ್ತು ಏಕತೆಯ ಹಬ್ಬ” ಎಂಬ ವಿಷಯದೊಂದಿಗೆ ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವೀದಾಸ್ ಎಸ್. ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಅವರು ಮಾತನಾಡಿ ದೀಪಾವಳಿಯ ನಿಜವಾದ ಅರ್ಥವನ್ನು ವಿವರಿಸಿ, ಜ್ಞಾನ, ಸೌಹಾರ್ದತೆ ಮತ್ತು ಸಕಾರಾತ್ಮಕತೆಯನ್ನು ಹರಡುವ ಹಬ್ಬವೆಂದು ಹೇಳಿದರು.
ಡಾ. ಎಂ. ವಿಶ್ವನಾಥ ಪೈ ಎಂ ಜಿ ಎಂ ಕಾಲೇಜಿನ ಉಪಪ್ರಾಂಶುಪಾಲರು ಬಿಸಿಎ ಸಂಯೋಜಕರು ಹಾಗೂ ಡಾ. ಮಲ್ಲಿಕಾ ಎ.ಶೆಟ್ಟಿ ಬಿಕಾಂ/ಬಿಬಿಎ ಸಂಯೋಜಕರು ಉಪಸ್ಥಿತರಿದ್ದರು. ದೀಪ ಪ್ರಜ್ವಲನದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗಾಗಿ ವಿವಿಧ ಮನರಂಜನಾ ಆಟೋಪಾಟಗಳು ಹಾಗೂ ಸ್ಪರ್ಧೆಗಳು ಆಯೋಜಿಸಲ್ಪಟ್ಟಿದ್ದು,ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


