ಮಂಗಳೂರು: ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ (ರಿ) ಮಂಗಳೂರು ಮತ್ತು ಆರೋಗ್ಯ ಭಾರತಿಯ ಜಂಟಿ ಆಶ್ರಯದಲ್ಲಿ ಗುರುವಾರದಂದು ನಾರ್ಲಪಡೀಲ್ ದ.ಕ. ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ ಜರಗಿತು.
ಚೂಂತಾರು ಪ್ರತಿಷ್ಠಾನದ ಟ್ರಸ್ಟಿ, ಆರೋಗ್ಯ ಭಾರತಿಯ ಜಿಲ್ಲಾ ಗೌರವಾಧ್ಯಕ್ಷ ಆದ ಡಾ. ಮುರಲೀ ಮೋಹನ ಚೂಂತಾರು ಅವರು ಮಕ್ಕಳಿಗೆ ದಂತ ಆರೋಗ್ಯ ಸಂರಕ್ಷಣೆಯ ಮಾಹಿತಿ ನೀಡಿದರು ಹಾಗೂ ಚೂಂತಾರು ಪ್ರತಿಷ್ಠಾನದ ವತಿಯಿಂದ ಶಾಲೆಯ ಎಲ್ಲ ಮಕ್ಕಳಿಗೂ ದಂತ ಸಂರಕ್ಷಣಾ ಸಲಕರಣೆ ಮತ್ತು ಕಲಿಕಾ ಸಾಧನಗಳನ್ನು ವಿತರಣೆ ಮಾಡಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಆರೋಗ್ಯ ಭಾರತಿಯ ಜಿಲ್ಲಾ ಜೊತೆ ಕಾರ್ಯದರ್ಶಿ ದಿನೇಶ್ ಚಂದ್ರಗಿರಿ ಅವರು ಮಕ್ಕಳಿಗೆ ನೀತಿಕಥೆ ಬೋಧಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಇಂದಿರಾ ಜಿ ಹಾಗೂ ಶಿಕ್ಷಕಿ ಜಾನೆಟ್ ಡಿ. ಮೆಲ್ಲೋ ಉಪಸ್ಥಿತರಿದ್ದರು. 32 ಮಕ್ಕಳು ಈ ಶಿಬಿರದ ಪ್ರಯೋಜನ ಪಡೆದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ




